More

    ಸರ್ಕಾರದ ಯೋಜನೆಗಳು ಸದ್ಬಳಕೆಗೊಳ್ಳಲಿ: ಹರತಾಳು ಹಾಲಪ್ಪ

    ಸಾಗರ: ಸರ್ಕಾರ ಕೆಲವು ಯೋಜನೆಗಳ ಮೂಲಕ ಜನರಿಗೆ ಪ್ರೋತ್ಸಾಹ ನೀಡುತ್ತಿದ್ದು, ಅದನ್ನು ದ್ವಿಗುಣಗೊಳಿಸಿಕೊಂಡು ಮುನ್ನಡೆಯಬೇಕು ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.
    ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಗುರುವಾರ ರಾಜ್ಯ ಕುಕ್ಕುಟ ಮಹಾಮಂಡಳಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನಾಟಿ ಕೋಳಿ ಮತ್ತು ಹೈನುಗಾರಿಕೆ ರೈತ ಫಲಾನುಭವಿಗಳಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮೂಲಕ ರಬ್ಬರ್ ನೆಲಹಾಸು ವಿತರಿಸಿ ಮಾತನಾಡಿದರು.
    ರೈತರು ಹೈನುಗಾರಿಕೆಯಲ್ಲಿ ವ್ಯವಸ್ಥಿತವಾಗಿ ತೊಡಗಿಕೊಳ್ಳಬೇಕು. ಜಾನುವಾರುಗಳ ಮೇವು ಮತ್ತು ಆರೋಗ್ಯದ ಬಗ್ಗೆ ಅಗತ್ಯ ಗಮನ ಹರಿಸಬೇಕು. ಇಂದು 103 ಫಲಾನುಭವಿಗಳಿಗೆ ಪ್ರೋತ್ಸಾಹದಾಯಕವಾಗಿ ಒಟ್ಟು 2,200 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ 30 ಜನ ರೈತ ಫಲಾನುಭವಿಗಳಿಗೆ ರಬ್ಬರ್ ನೆಲಹಾಸು ಸಬ್ಸಿಡಿ ದರದಲ್ಲಿ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಜನರ ಉದ್ಯೋಗ ಹಾಗೂ ಬದುಕಿನ ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ರೈತರು ವ್ಯವಸಾಯಕ್ಕೆ ಸಂಬಂಧಿಸಿದ ಕಸುಬುಗಳನ್ನು ಉನ್ನತೀಕರಣಗೊಳಿಸಿಕೊಳ್ಳುವಲ್ಲಿ ಸರ್ಕಾರದ ಯೋಜನೆಯನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಮುನ್ನಡೆಯಬೇಕು ಎಂದರು.
    ಮುಖ್ಯ ಪಶುವೈದ್ಯಾಧಿಕಾರಿ ಡಾ. ಉಮಾದೇವಿ ಮಾತನಾಡಿ, ಇಲಾಖೆ ವತಿಯಿಂದ ನೀಡಿರುವ ಪ್ರೋತ್ಸಾಹದ ಯೋಜನೆಗಳನ್ನು ಫಲಾನುಭವಿಗಳು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕು. ನ.7ರಿಂದ ಡಿ.7ರ ವರೆಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. ಲಸಿಕೆ ಹಾಕಲು ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts