More

    ಸರ್ಕಾರದ ವಿರುದ್ಧ ಮತ್ತೇ ಕಂದಕೂರ ಕಿಡಿ

    ಯಾದಗಿರಿ: ಪ್ರಸಕ್ತ ಸಾಲಿನಲ್ಲಿ ಗುರುಮಠಕಲ್ ಕ್ಷೇತ್ರ ಅತಿವೃಷ್ಠಿ ಮತ್ತು ಪ್ರವಾಹದಿಂದ ತತ್ತರಿಸಿದ್ದು, ಆದರೆ ಸರ್ಕಾರದ ಗುರುಮಠಕಲ್ ಪ್ರವಾಹ ಪೀಡಿತ ತಾಲೂಕಿನ ಪಟ್ಟಿಯಲ್ಲಿ ಸೇರ್ಪಡೆ ಮಾಡದಿರುವುದು ಬೇಸರ ತರಿಸಿದೆ ಎಂದು ಶಾಸಕ ನಾಗನಗೌಡ ಕಂದಕೂರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಬಾರಿ ಉತ್ತರ ಕರ್ನಾಟಕ ಅನೇಕ ಜಿಲ್ಲೆಗಳು ವರುಣನ ಅವಕೃಪೆಗೆ ಒಳಗಾಗಿ ನಲುಗಿವೆ. ವಿಶೇಷವಾಗಿ ಯಾದಗಿರಿ ಜಿಲ್ಲೆ ಅದರಲ್ಲೂ ಗುರುಮಠಕಲ್ ತಾಲೂಕಿನಲ್ಲಿ ಅತಿವೃಷ್ಠಿಯಿಂದಾಗಿ ರೈತಾಪಿ ವರ್ಗ ಬೆಳೆದ ಬೆಳೆಗಳು ಹಾಳಾಗಿವೆ. ಯಾದಗಿರಿ ಜಿಲ್ಲೆಯ 5 ತಾಲೂಕುಗಳನ್ನು ಪ್ರವಾಹ ಪೀಡಿತ ಪಟ್ಟಿಗೆ ಸೇರ್ಪಡೆ ಮಾಡಿದ ಸಕರ್ಾರ ಗುರುಮಠಕಲ್ ತಾಲೂಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ತಿಳಿಸಿದ್ದಾರೆ.

    ಗುರುಮಠಕಲ್ ತಾಲೂಕಿನಲ್ಲಿ ಪ್ರಸಕ್ತ ಮುಂಗಾರಿನ 45108 ಹೆಕ್ಟೇರ್ನಷ್ಟು ಬಿತ್ತನೆಯಾಗಿದ್ದು, ಇದರಲ್ಲಿ ಮುಖ್ಯವಾಗಿ ಹತ್ತಿ 20344, 12265 ತೊಗರಿ, 6924 ಹೆಸರು ಮತ್ತು 4626 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಅಲ್ಲದೆ ಮುಂಗಾರು ಹಂಗಾಮಿನಲ್ಲಿ ವಾಡಿಕೆ ಮಳೆ 157 ಮಿ.ಮೀಗಿಂತ ಶೇ.88 ರಷ್ಟು ಅಂದರೆ 295 ಮಿ.ಮೀಟರ್ ಮಳೆಯಾಗಿದೆ. ಜುಲೈನಿಂದ ಆಗಷ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನಲ್ಲಿ 21456 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ನಾನಾ ಬೆಳೆಗಳು ಸಂಪೂರ್ಣ ನಾಶವಾಗಿವೆ ಎಂದು ವಿವರಿಸಿದ್ದಾರೆ.

    ಇದರಿಂದ ತಾಲೂಕಿನ ಸುಮಾರು 18071 ಜನ ರೈತರು ಬೆಳೆ ಬೆಳೆಗಳು ಕೈಗೆ ಸಿಗದೆ ಕಂಗಾಲಾಗಿದ್ದಾರೆ. ಗುರುಮಠಕಲ್ ತಾಲೂಕನ್ನು ಅತಿವೃಷ್ಠಿ ಮತ್ತು ಪ್ರವಾಹ ಪೀಡಿತ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ನಾನು ನವೆಂಬರ್ 10 ರಂದು ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಗುರುಮಠಕಲ್ ತಾಲೂಕು ತೆಲಂಗಾಣದ ಗಡಿಗೆ ಅಂಟಿಕೊಂಡಿದೆ. ನನ್ನ ಕ್ಷೇತ್ರದ ಜನ ಮೊದಲೇ ಕೋವಿಡ್-19 ನಿಂದ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಇದಲ್ಲೆವನ್ನು ಮನಗೊಂಡು ನಾನು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿದ್ದು, ಅವರು ಕೂಡಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಗುರುಮಠಕಲ್ ತಾಲೂಕನ್ನು ಪ್ರವಾಹ ಪೀಡಿತ ತಾಲೂಕಿಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದಾರೆ. ಕೂಡಲೆ ಸರ್ಕಾರದ ನಮ್ಮ ತಾಲೂಕಿನ ಬಗ್ಗೆ ಗಮನ ಹರಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಶಾಸಕ ಕಂದಕೂರ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

    ,

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts