More

    ಸರ್ಕಾರದ ವಿರುದ್ಧ ವಿಪಕ್ಷಗಳ ಅಪಪ್ರಚಾರ ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ ಆರೋಪ

    ಕುಣಿಗಲ್ : ಜನಪರ ಕೆಲಸ ಮಾಡುತ್ತಿರುವ ಸರ್ಕಾರದ ವಿರುದ್ಧ ವಿಪಕ್ಷಗಳು ಅಪಪ್ರಚಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ ಆರೋಪಿಸಿದರು.

    ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ತಾಲೂಕು ಬಿಜೆಪಿ ಮಂಡಲ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆಕ್ಸಿಜನ್ ಬೆಡ್, ಹಾಸಿಗೆ ಖರೀದಿಯಲ್ಲಿ 2500 ಸಾವಿರ ಕೋಟಿ ರೂಪಾಯಿ ರಾಜ್ಯ ಸರ್ಕಾರ ಹಗರಣ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪ ನಿರಾಧಾರವಾಗಿದೆ ಎಂದು ಕಿಡಿಕಾರಿದರು.

    ಹಗರಣದ ಬಗ್ಗೆ ದಾಖಲೆ ಇದ್ದರೆ ಸಾರ್ವಜನಿಕರ ಮುಂದೆ ಇಡಲಿ, ಸರ್ಕಾರ ಜನರ ಪ್ರಾಣ ಉಳಿಸಲು ಅವಿರತ ಪ್ರಯತ್ನ ಮಾಡುತ್ತಿದ್ದರೆ, ಸೋಂಕಿನಿಂದ ಮೃತಪಟ್ಟ ಸತ್ತವರ ಸಾವಿನ ಲೆಕ್ಕವನ್ನು ಕಾಂಗ್ರೆಸ್ ಕೇಳುತ್ತಿರುವುದು ಅವರಿಗೆ ನಾಚಿಕೆಗೇಡು ಎಂದರು.

    ಅಪಪ್ರಚಾರ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಉಳಿವಿಗಾಗಿ ತಜ್ಞರ ಸಮಿತಿ ರಚಿಸಿ, ಪ್ರಪಂಚದಲ್ಲೇ ಮೊದಲ ಬಾರಿ ಕರೊನಾ ಲಸಿಕೆಯನ್ನು ದೇಶಕ್ಕೆ ಪರಿಚಯಿಸಿದರು. ಆದರೆ ಕಾಂಗ್ರೆಸ್ ವ್ಯಾಕ್ಸಿನ್ ಬಗ್ಗೆ ಜನರಿಗೆ ಇಲ್ಲಸಲ್ಲದ ಅಪಪ್ರಚಾರ ಮಾಡಿ ಜನರನ್ನು ದಾರಿ ತಪ್ಪಿಸಿ, ಕರೊನಾ ಲಸಿಕೆಯಿಂದ ದೂರ ಉಳಿಯುವಂತೆ ಮಾಡಿದರು. ಇದರಿಂದ ಕರೊನಾಗೆ ಹೆಚ್ಚು ಜನರು ಸಾಯುವಂತಾಯಿತು. ರಾಹುಲ್ ಗಾಂಧಿಗೆ ತುರ್ತು ಸಂದರ್ಭದಲ್ಲಿ ಅಧಿಕಾರ ನೀಡಿದ್ದರೆ ಇನ್ನೂ ಹೆಚ್ಚು ಅನಾಹುತಗಳು ಸಂಭವಿಸುತ್ತಿದ್ದವು ಎಂದು ಅಶ್ವತ್ಥ ನಾರಾಯಣ್‌ಗೌಡ ಹೇಳಿದರು.

    ಪಿಕಾರ್ಡ್ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್ ಮಾತನಾಡಿ, ಕರೊನಾ ವಿಚಾರದಲ್ಲಿ ಶಾಸಕ ಡಾ.ರಂಗನಾಥ್ ೇಸ್ ಬುಕ್, ವಾಟ್ಸ್ ಆ್ಯಪ್‌ನಲ್ಲಿ ಪ್ರಚಾರದ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಜನ ಸಾಮಾನ್ಯರಿಗೆ ಅಗತ್ಯವಾಗಿರುವ ಮೂಲಸೌಲಭ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಡಿಕೆಎಸ್ ಚಾರಿಟಬಲ್ ಟ್ರಸ್ ವತಿಯಿಂದ 75 ಸಾವಿರ ಕುಟುಂಬಗಳಿಗೆ ಉಚಿತವಾಗಿ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ದಿನಸಿ ಕಿಟ್ ವಿತರಣೆಗಾಗಿ ಗ್ರಾಪಂನಲ್ಲಿ 5ರಿಂದ 9 ಲಕ್ಷ ರೂಪಾಯಿವರೆಗೆ ಬಿಲ್ ಪಡೆದಿದ್ದಾರೆ, ಬಿಲ್ ನೀಡದ ಪಿಡಿಒಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಕೆ.ರಮೇಶ್, ಕಾರ್ಯದರ್ಶಿ ಸುಜಾತಾ, ಚಂದ್ರಶೇಖರ್, ತಾಲೂಕು ಅಧ್ಯಕ್ಷ ಕೆ.ಎಸ್.ಬಲರಾಮ್, ಪ್ರಧಾನ ಕಾರ್ಯದರ್ಶಿಗಳಾದ ದಿಲೀಪ್‌ಗೌಡ, ದೇವರಾಜ್, ಕಾರ್ಯದರ್ಶಿ ಎನ್.ಚಂದ್ರಶೇಖರ್ ಇದ್ದರು.

    ಮೂಲ ಬಿಜೆಪಿಗರ ಕಡೆಗಣನೆ : ಜಿಪಂ, ತಾಪಂ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಮೂಲ ಹಾಗೂ ಹೊಸ ಬಿಜೆಪಿಯವರೆಂದು ತಾರತಮ್ಯ ಮಾಡದೆ ಎಲ್ಲರನ್ನೂ ಒಗ್ಗೂಡಿಸಿ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಿ ತಾಪಂ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಹಾಗೂ ಆರು ಜಿಪಂ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಲು ಕಾರ್ಯೋನ್ಮುಖರಾಗುವಂತೆ ಪಿಕಾರ್ಡ್ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್‌ಗೆ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡ ಸಲಹೆ ನೀಡಿದರು.

    ದೇಶದ ಅಭಿವೃದ್ಧಿಗೆ ಜನಸಂಖ್ಯೆ ಹೆಚ್ಚಳ ಮಾರಕವಾಗಿದೆ. ಹಾಗಾಗಿ ಉತ್ತರ ಪ್ರದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಗೆ ತರಬೇಕು.
    ಅಶ್ವತ್ಥನಾರಾಯಣ್‌ಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts