ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಮರು ಜಾತಿಗಣತಿ ಮಾಡಲಾಗುತ್ತಿದೆ

Prathap Simha
Published on

ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಮರು ಜಾತಿಗಣತಿ ಮಾಡಲಾಗುತ್ತಿದೆ ಎಂದು ಮಾಜಿ ಸಂಸದ ಪ್ರತಾಪಸಿಂಹ ಆರೋಪಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರು ಜಾತಿಗಣತಿ ಕುರಿತು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ 150 ಕೋಟಿ ವ್ಯಯ ಮಾಡಿ ಕಾಟಾಚಾರಕ್ಕೆ ಜಾತಿ ಗಣತಿ ಮಾಡಿಸಿದ್ದರು. ಇದನ್ನು ಬಿಜೆಪಿ-ಜೆಡಿಎಸ್ ವಿರೋಧಿಸಿತು. ಇದು ಅವೈಜ್ಞಾನಿಕ ಎಂದು ಎಲ್ಲರಿಗೂ ಗೊತ್ತಿತ್ತು. ಈಗ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ 150 ಕೋಟಿ ಹಣ ವ್ಯರ್ಥವಾದಂತಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತೇವೆ ಎಂದು ಹೇಳಿದೆ. ಹೀಗಿದ್ದಾಗ ಮತ್ತೊಂದು ಬಾರಿ ನಿಮ್ಮ ಗಣತಿ ಮಾಡುವುದು ಬೇಡ. ಇದು ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರವಷ್ಟೇ ಎಂದರು.

ಕೇಂದ್ರ ಸರ್ಕಾರ ರಾಜಕೀಯವಾಗಿ ಬಲ ತೋರಿಸಲು ಈ ಸರ್ವೇ ಮಾಡುತ್ತಿಲ್ಲ. ಜನರ ಆರ್ಥಿಕ ಸ್ಥಿತಿಗತಿ ಬಗ್ಗೆ ತಿಳಿಯಲು ಸರ್ವೇ ಮಾಡುತ್ತಿದೆ. ನಮ್ಮ ಸರ್ವೇ ಆಗತ್ತದೆ, ನೀವು ಸುಮ್ಮನೆ ಇರಿ. ನಿಮ್ಮ ಸರ್ವೇ ನಮಗೆ ಅಗತ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net