More

    ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ

    ಹನೂರು: ಸರ್ಕಾರದಿಂದ ದೊರಕುವ ಸವಲತ್ತುಗಳ ಪ್ರಯೋಜನವನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಶಾಸಕ ಆರ್. ನರೇಂದ್ರ ಸಲಹೆ ನೀಡಿದರು.


    ಪಟ್ಟಣದ ಡಾ. ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ಮಂಗಳವಾರ ಡಾ. ಬಾಬು ಜಗಜೀವನರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಟೈಲರಿಂಗ್ ತರಬೇತಿ ಪಡೆದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು.


    ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವುದರ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರಾಗುತ್ತಿದ್ದಾರೆ. ಈ ದಿಸೆಯಲ್ಲಿ ಮನೆಯಲ್ಲಿಯೇ ಉದ್ಯೋಗ ಪಡೆಯಲು ಟೈಲರಿಂಗ್ ತರಬೇತಿ ಪಡೆದಿರುವುದು ಮೆಚ್ಚುಗೆಯ ಸಂಗತಿ. ಪ್ರಾರಂಭದಲ್ಲಿ ಮಾರುಕಟ್ಟೆಯ ಸಮಸ್ಯೆ ಎದುರಾಗಬಹುದು. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡದೆ ವೃತ್ತಿಯಲ್ಲಿ ಯಶಸ್ಸು ಕಾಣುವತ್ತ ಗಮನಹರಿಸಬೇಕು. ಇದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದರ ಜತೆಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ದಿಸೆಯಲ್ಲಿ ಅಧಿಕಾರಿಗಳು ಮಹಿಳೆಯರಿಗೆ ಉತ್ತೇಜನ ನೀಡಬೇಕು. ಜತೆಗೆ ಸರ್ಕಾರದ ಸವಲತ್ತುಗಳನ್ನು ಆದ್ಯತೆ ಮೇರೆಗೆ ಯಾವುದೇ ತಾರತಮ್ಯವಿಲ್ಲದೆ ಒದಗಿಸಿಕೊಡಬೇಕು ಎಂದು ತಿಳಿಸಿದರು.


    ಫಲಾನುಭವಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಯಿತು. ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್‌ಕುಮಾರ್, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ನಿಗಮದ ವ್ಯವಸ್ಥಾಪಕ ಜಯರಾಮಯ್ಯ, ಜಿಲ್ಲಾ ಸಂಯೋಜಕ ಚೇತನ್, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್, ಮುಖಂಡರಾದ ಮಂಜೇಶ್, ನಟರಾಜು, ರವಿ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts