More

    ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಿ

    ಕಟಕೋಳ: ರಾಜ್ಯದಲ್ಲಿಯೇ ಪ್ರಖ್ಯಾತಿ ಪಡೆದ ಸುಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರೆಗೆ ಬರುವ ರೈತಾಪಿ ಹಾಗೂ ಭಕ್ತರಿಗೆ ಅನುಕೂಲವಾಗುವಂತೆ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆಗಳ ಸ್ಟಾಲ್‌ಗಳನ್ನು ಹಾಕಬೇಕು. ಬೇಕಾಬಿಟ್ಟಿಯಾಗಿ ಪ್ರದರ್ಶನ ನಡೆಸುವುದು ಸೂಕ್ತವಲ್ಲ ಎಂದು ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿದರು.

    ಸಮೀಪದ ಸುಕ್ಷೇತ್ರ ಗೊಡಚಿಯಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ತಾಲೂಕು ಪಂಚಾಯಿತಿ ರಾಮದುರ್ಗ ಹಾಗೂ ಗ್ರಾಮ ಪಂಚಾಯಿತಿ ಗೊಡಚಿ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಮುಂಬರುವ ದಿನಗಳಲ್ಲಿ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ವಸ್ತು ಪ್ರದರ್ಶನ ಮಳಿಗೆಗಳನ್ನು ನಿರ್ಮಿಸಬೇಕು. ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ರೈತರು ತಮ್ಮ ಒಕ್ಕಲುತನದಲ್ಲಿ ಅದನ್ನು ಅಳವಡಿಕೆ ಮಾಡಿಕೊಳ್ಳುವಂತೆ ವಸ್ತು ಪ್ರದರ್ಶನ ಪ್ರೇರಣೆ ನೀಡುವಂತಿರಬೇಕು. ರೈತರಿಗೆ ಬೆಳೆ ಪರಿಹಾರ ಸೇರಿ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.

    ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಜಾತ್ರೆ ನಿಷೇಧಿಸಲಾಗಿತ್ತು. ಸದ್ಯ ಕರೊನಾ ಮಹಾಮಾರಿ ದೂರವಾಗಿದ್ದು, ಮುಂದೆಂದೂ ಇಂತಹ ರೋಗ ಬಾರದಿರಲಿ ಎಂದು ವೀರಭದ್ರೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸೋಣ. ಜನತೆಗೆ ಆರೋಗ್ಯ ಮತ್ತು ಆಯುಷ್ಯವನ್ನು ವೀರಭಧ್ರಸ್ವಾಮಿ ಮತ್ತು ಭದ್ರಕಾಳಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.

    ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ರೈತರು ವಸ್ತು ಪ್ರದರ್ಶನದ ಸಂದೇಶ ಅರಿತು ಅದರ ಸದ್ಭಳಕೆ ಮಾಡಿಕೊಳ್ಳಬೇಕು. ವೀರಭದ್ರೇಶ್ವರ ಜಾತ್ರೆಗೆ ಆಗಮಿಸುವ ಭಕ್ತಾಧಿಗಳು ಸ್ವಯಂ ಶಿಸ್ತಿನೊಂದಿಗೆ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸುವ ಮೂಲಕ ಜಾತ್ರೆ ಯಶಸ್ವಿಗೆ ಸಹಕಾರ ನೀಡಬೇಕು ಎಂದರು.

    ವಿವಿಧ ಇಲಾಖೆಗಳಿಂದ ನಿರ್ಮಿಸಲಾದ ವಸ್ತು ಪ್ರದರ್ಶನ ಸ್ಟಾಲ್‌ಗಳನ್ನು ಗಣ್ಯರು ಉದ್ಘಾಟಿಸಿದರು. ರೈತರು ಹಾಗೂ ಸಾರ್ವಜನಿಕರಿಗೆ ವಸ್ತು ಪ್ರದರ್ಶನಗಳ ಉಪಯುಕ್ತತೆ ಕುರಿತು ಮಾಹಿತಿ ನೀಡಲಾಯಿತು.
    ಕಿಲ್ಲಾ ತೊರಗಲ್ ಗಚ್ಚಿನ ಹಿರೇಮಠದ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗೊಡಚಿ ವಿಮಲಕೆಡ್ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಗೊಡಚಿಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ಗ್ರಾಪಂ ಅಧ್ಯಕ್ಷ ಈರಣ್ಣ ಗೊಡವ ಅಧ್ಯಕ್ಷತೆ ವಹಿಸಿದ್ದರು.

    ವೀರಭದ್ರೇಶ್ವರ ಟ್ರಸ್ಟ್ ಕಮಿಟಿ ದರ್ಮದರ್ಶಿ ಸಂಗ್ರಾಮಸಿಂಹ ಶಿಂಧೆ, ಶ್ರೀಮಂತ ಶಿಂಧೆ, ಕಾರ್ತಿಕ ಶಿಂಧೆ, ಗ್ರಾಪಂ ಉಪಾಧ್ಯಕ್ಷೆ ರೇಣವ್ವ ಭಜಂತ್ರಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ರಾಜಯೋಗಿನಿ ವೈಶಾಲಿ ಅಕ್ಕನವರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ, ಮುಖಂಡರಾದ ಸಂಗನಗೌಡ ಪಾಟೀಲ, ಸಂಗಪ್ಪ ಪಾಕನಟ್ಟಿ, ಕಾಸಿನಾಥಗೌಡ ಪಾಟೀಲ, ಶಿವನಗೌಡ ಪಾಟೀಲ, ಬಸನಗೌಡ ಪಾಟೀಲ, ಪತ್ರೆಪ್ಪ ಮಲ್ಲಾಪೂರ, ಲಚ್ಚಪ್ಪ ಕಾಮನ್ನವರ, ಈರಣ್ಣ ಕಾಮನ್ನವರ, ಪಿಡಿಒ ಚೆನ್ನಮ್ಮ ಕೊಪ್ಪದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts