More

    ಸರ್ಕಾರದ ಸೌಲಭ್ಯ ಬಡವರ ಕೈಸೇರಲಿ, ಸಚಿವ ಎಂಟಿಬಿ ನಾಗರಾಜ್ ಆಶಯ 

    ನಂದಗುಡಿ: ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಬಡವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.

    ಹೋಬಳಿಯ ಬೈಲನರಸಾಪುರ ಗ್ರಾಪಂನ ದೊಡ್ಡಕೊರಟಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಬಡವರ ಅಭಿವೃದ್ಧಿಗಾಗಿ ಸರ್ಕಾರ ಹತ್ತಾರು ಯೋಜನೆ ಅನುಷ್ಠಾನ ಮಾಡುತ್ತಿದೆ. ಆದರೆ ಅದನ್ನು ಸಮರ್ಪಕವಾಗಿ ಬಡವರಿಗೆ, ಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುವ ದೊಡ್ಡ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

    ಬಡ ಮಧ್ಯಮ ವರ್ಗದವರು ಸೌಲಭ್ಯ ಪಡೆಯಲು ತಾಲೂಕು ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬಳಿಗೆ ಅಲೆಯುವುದನ್ನು ತಪ್ಪಿಸಿ, ಬಡವರ ಮನೆಗೇ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ರೂಪಿಸಿದೆ ಎಂದರು.

    ಎಲ್ಲ ಇಲಾಖೆ ಅಧಿಕಾರಿಗಳನ್ನು ಒಂದೇ ವೇದಿಕೆಯಲ್ಲಿ ಬರುವಂತೆ ಮಾಡಿ, ಸ್ಥಳೀಯರ ಸಮಸ್ಯೆ ಸ್ಥಳದಲ್ಲೇ ಪರಿಹರಿಸುವ ಮಹತ್ವವಾದ ಕಾರ್ಯ ಇದಾಗಿದೆ ಎಂದರು.
    ತಹಸೀಲ್ದಾರ್ ಮಹೇಶ್ ಕುಮಾರ್ ಮಾತನಾಡಿ, ಬಡವರಿಗೆ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ನಡೆ, ಹಳ್ಳಿಯ ಕಡೆ ಕಾರ್ಯಕ್ರಮದಿಂದ ಮತ್ತಷ್ಟು ಜನಸ್ನೇಹಿತವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು.

    ವಿವಧ ಇಲಾಖೆಯಿಂದ ಸುಮಾರು 358 ಫಲಾನುಭವಿಗಳಿಗೆ ಹಲವು ಸೌಲಭ್ಯ ವಿತರಿಸಲಾಯಿತು. ಕುರುಬರ ಸಂಘದ ಅಧ್ಯಕ್ಷ ರಘುವೀರ್, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ಸಿ.ನಾಗರಾಜ್, ನಗರ ಬಿಜೆಪಿ ಘಟಕದ ಅಧ್ಯಕ್ಷ ಡಾ.ಸಿ.ಜಯರಾಜ್, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗೇಶ್, ಗ್ರಾಪಂ ಸದಸ್ಯೆ ನಾರಾಯಣಮ್ಮ ಚಿನ್ನಪ್ಪಯ್ಯ, ಮುಖಂಡರಾದ ಶ್ರೀಕಾಂತ್, ಕದಿರಪ್ಪ, ಪೂಜಪ್ಪ, ನರಸಿಂಹಪ್ಪ, ಶಿವಣ್ಣ, ಸೀನಪ್ಪ, ಕೊರಟಿ ಶಂಕರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts