More

    ಸರ್ಕಾರದ ಸೌಲಭ್ಯ ಸದ್ಬಳಸಿಕೊಳ್ಳಿ, ನಗರಸಭೆ ಅಧ್ಯಕ್ಷೆ ಲತಾ ಹೇಮಂತ್‌ಕುಮಾರ್ ಸಲಹೆ, ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ತರಬೇತಿ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ಬೀದಿಬದಿ ವ್ಯಾಪಾರಿಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿದ್ದು, ವ್ಯಾಪಾರಿಗಳು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಲತಾ ಹೇಮಂತ್‌ಕುಮಾರ್ ತಿಳಿಸಿದರು.
    ನಗರದ ಪೇಟೆಬೀದಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ನಗರಸಭೆ, ಗ್ರಾಮಾಂತರ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ನಾರಾಯಣ ತರಬೇತಿ ಸಂಸ್ಥೆ ಸಹಯೋಗದಲ್ಲಿ ಡೇ-ನಲ್ಮ್ ಯೋಜನೆಯಡಿ ಬೀದಿಬದಿ ಆಹಾರ ಮಾರಾಟ ಮಾಡುವ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
    ರಾಜ್ಯ ಸರ್ಕಾರ ಡೇ-ನಲ್ಮ್ ಯೋಜನೆಯಡಿ ಬೀದಿಬದಿ ಹಾಗೂ ತಳ್ಳುಗಾಡಿ ವ್ಯಾಪಾರಿಗಳಿಗೆ ಸಾಕಷ್ಟು ಸೌಕರ್ಯ ಕಲ್ಪಿಸಿದೆ. ಬೀದಿಬದಿ ವ್ಯಾಪಾರ ಮಾಡುವ ವ್ಯಕ್ತಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಗ್ರಾಹಕರನ್ನು ದೇವರಂತೆ ಭಾವಿಸುವ ವ್ಯಾಪಾರಿಗಳು ಅವರಿಗೆ ಅತ್ಯಂತ ಸುರಕ್ಷತೆಹೊಂದಿರುವ ಆಹಾರವನ್ನು ನೀಡಬೇಕು ಎಂದರು. ಮಳೆಚಳಿಗಾಳಿ ಲೆಕ್ಕಿಸದೆ ಬೀದಿಯಲ್ಲಿ ನಿತ್ಯ ಕಾರ್ಯನಿರ್ವಹಿಸುವ ಬೀದಿ ಬದಿ ವ್ಯಾಪಾರಿಗಳು ಆರೋಗ್ಯದ ಬಗ್ಗೆ ಕಾಳಜಿವಹಿಸಿಕೊಂಡು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.
    ಸಂಪನ್ಮೂಲ ವ್ಯಕ್ತಿ ಶಶಿಕಾಂತ್ ಮಾತನಾಡಿ, ಬೀದಿಬದಿ ವ್ಯಾಪಾರಸ್ಥರಿಗೆ ಆರೋಗ್ಯ, ಶುಚಿತ್ವ ಹಾಗೂ ಸಂಚಾರ ನಿಯಮಗಳ ಬಗ್ಗೆ ವಿವರವಾಗಿ ತಿಳಿಸಲಾಗುತ್ತದೆ. ರಾಜ್ಯ ಸರ್ಕಾರ ನೂತವಾಗಿ ಬೀದಿಬದಿ ವ್ಯಾಪಾರಿಗಳ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಿದೆ. ಡೇ-ನಲ್ಮ್ ಯೋಜನೆಯಡಿ ಬೀದಿಬದಿ ಆಹಾರ ಮಾರಾಟ ಮಾಡುವ ಬೀದಿ ವ್ಯಾಪಾರಿಗಳು ತಾವು ಉತ್ಪಾದನೆ ಆಹಾರವನ್ನು ಸುರಕ್ಷತೆ ಮಾಡುವ ವಿಧಾನ ಹಾಗೂ ಅನುಸರಣೆ ಮಾಡಬೇಕಾದ ಕೆಲ ಅಂಶಗಳನ್ನು ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
    ಕಿಟ್ ವಿತರಣೆ: ನಗರಸಭೆ ವ್ಯಾಪ್ತಿಯಲ್ಲಿ ಗುರುತಿನ ಚೀಟಿ ಹೊಂದಿರುವ 680ಕ್ಕೂ ಹೆಚ್ಚು ಮಂದಿ ಬೀದಿಬದಿ ವ್ಯಾಪಾರಿಗಳಿದ್ದಾರೆ. ಅದರಲ್ಲಿ ಆಹಾರ ಸುರಕ್ಷತೆ ತರಬೇತಿ ಹಿನ್ನೆಲೆಯಲ್ಲಿ ಬೀದಿಬದಿಯಲ್ಲಿ ಹೋಟೇಲ್, ಗೋಬಿ, ಪಾನಿಪುರಿ ಸೇರಿ ವಿವಿಧ ಬಗ್ಗೆ 90ಕ್ಕೂ ಹೆಚ್ಚು ಮಂದಿ ವ್ಯಾಪಾರಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜತೆಗೆ ಆಹಾರ ಸುರಕ್ಷತೆ ಕುರಿತ ಕೈಪಿಡಿ ಸೇರಿ ರಕ್ಷಣಾ ಕಿಟ್‌ಗಳನ್ನು ವಿತರಣೆ ಮಾಡಲಾಯಿತು ಎಂದು ನಗರಸಭೆ ಸಮುದಾಯ ಸಂಘಟಕಿ ಅನಸೂಯಾ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts