More

    ಸರ್ಕಾರಿ ಕಚೇರಿ, ವಸತಿಗೃಹಗಳಲ್ಲಿ ಕರೊನಾ ಭೀತಿ

    ಧಾರವಾಡ: ನಗರದಲ್ಲಿ ಕರೊನಾ ಹಾವಳಿ ಮುಂದುವರಿದಿದ್ದು, ಹಲವು ಸರ್ಕಾರಿ ಕಚೇರಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ಕಚೇರಿಗಳನ್ನು ಬಂದ್ ಮಾಡಲಾಗಿದ್ದು, ಸಿಬ್ಬಂದಿಯಲ್ಲಿ ಆತಂಕ ಮಡುಗಟ್ಟಿದೆ.

    ನಗರದ ತಹಸೀಲ್ದಾರ್ ಕಚೇರಿಯ ಗುತ್ತಿಗೆ ನೌಕರ ಎನ್ನಲಾದ ವ್ಯಕ್ತಿಯಲ್ಲಿ 3 ದಿನಗಳ ಹಿಂದೆ ಕರೊನಾ ಸೋಂಕು ದೃಢಪಟ್ಟಿದೆ. ಆತ ತಹಸೀಲ್ದಾರ್ ಕಚೇರಿಯ ಹಲವು ಅಧಿಕಾರಿ, ಸಿಬ್ಬಂದಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿದ್ದಾನೆ. ಈ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಸೋಮವಾರ ಇಡೀ ಕಚೇರಿಯನ್ನು ಬಂದ್ ಮಾಡಲಾಗಿತ್ತು. ತಹಸೀಲ್ದಾರ್ ಕಚೇರಿಗೆ ವಿವಿಧ ಕೆಲಸಗಳಿಗಾಗಿ ಬಂದಿದ್ದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

    ಸೋಂಕಿತ ವ್ಯಕ್ತಿ ಈ ಮೊದಲು ತಹಸೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿ, ತಹಸೀಲ್ದಾರ್ ಕಚೇರಿಯ ಅಧಿಕಾರಿಗಳೊಂದಿಗೆ ಒಡನಾಟ ಹೊಂದಿದ್ದ. ಕೆಲಸ ಬಿಟ್ಟರೂ ಆಹಾರ ಇಲಾಖೆ, ಭೂಮಿ ವಿಭಾಗ, ಪಹಣಿ ಪತ್ರ ವಿತರಣೆ ವಿಭಾಗದ ಸಿಬ್ಬಂದಿಯೊಂದಿಗೆ ಸಂಪರ್ಕ ಹೊಂದಿದ್ದ. ಕೆಲ ದಿನಗಳ ಹಿಂದೆ ಕರೊನಾ ಸೋಂಕಿನ ಗುಣಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೈಗೆ ಕ್ವಾರಂಟೈನ್ ಸೀಲ್ ಹಾಕಲಾಗಿತ್ತು. ಆದರೂ ಆತ ಮನೆಯಲ್ಲಿರದೆ ತಹಸೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಇಡೀ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದ್ದು, ಸೋಮವಾರ ಸೀಲ್​ಡೌನ್ ಮಾಡಲಾಗಿತ್ತು.

    ಅರಣ್ಯ ಇಲಾಖೆಯ ಸಿಬ್ಬಂದಿ ಎನ್ನಲಾದ ವ್ಯಕ್ತಿಯೊಬ್ಬನನಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಅರಣ್ಯ ಸಂಕೀರ್ಣವನ್ನು ಬಂದ್ ಮಾಡಲಾಗಿದೆ. ಮತ್ತೊಂದೆಡೆ ಉಪನಗರ ಠಾಣೆ ಪಕ್ಕದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಯ ವಸತಿಗೃಹದ ಒಟ್ಟು ಐವರಿಗೆ ಕರೊನಾ ಸೋಂಕು ಬಾಧಿಸಿದೆ. ಈ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೀಲ್​ಡೌನ್ ಮಾಡಲಾಗಿದ್ದು, ಒಳ- ಹೊರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts