More

    ಸರ್ಕಾರಿ ನೌಕರರಿಗೆ ಸಾಹಿತ್ಯ, ಸಾಂಸ್ಕೃತಿಕ ಅಭಿರುಚಿ ಅಗತ್ಯ

    ದಾವಣಗೆರೆ: ಸರ್ಕಾರಿ ನೌಕರರು ಇಲಾಖೆ ಕೆಲಸದ ಜತೆಯಲ್ಲಿ ಸಾಹಿತ್ಯ, ಸಂಗೀತ ಇನ್ನಿತರ ಕ್ಷೇತ್ರಗಳಲ್ಲೂ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
     ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಮಾತನಾಡಿ, ನಿಮ್ಮ ಆರೋಗ್ಯ ಕಾಪಾಡಿಕೊಂಡು, ಮಕ್ಕಳ ಭವಿಷ್ಯ ರೂಪಿಸುವ ಬಗ್ಗೆ ಗಮನ ಕೊಡಬೇಕು ಎಂದು ಹೇಳಿದರು.
     ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದರು.
     ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರಿಗೆ ಅದರಲ್ಲೂ ಚಾಲಕರಿಗೆ ಮೊದಲು ಗೌರವ ಧನವನ್ನು ನೀಡಬೇಕು. ಕರ್ತವ್ಯ ನಿರ್ವಹಿಸಿದ ಎಲ್ಲರೂ ಕಡ್ಡಾಯವಾಗಿ ಹಾಜರಾತಿ ನೀಡಬೇಕು ಎಂದು ತಿಳಿಸಿದರು.
     ಎಲ್ಲ ಸರ್ಕಾರಿ ನೌಕರರ ವೇತನವು ತಾಂತ್ರಿಕ ದೋಷದಿಂದ ತಡವಾಗಿದ್ದು ಶೀಘ್ರ ಕಾರ್ಯಗತವಾಗಲಿದೆ. ಶಾಮನೂರಿನಲ್ಲಿ ನಿರ್ಮಾಣವಾಗಿರುವ ಸ್ಮಾರ್ಟ್‌ಸಿಟಿ ಕಟ್ಟಡವನ್ನು ಸದ್ಯದಲ್ಲೆ ಇಲಾಖೆಗೆ ಹಸ್ತಾಂತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಆಯುಷ್ ಇಲಾಖೆಯಿಂದ ಯಾವುದೆ ಅನುಮತಿ ಇಲ್ಲದೆ ಆಯುರ್ವೇದಿಕ್ ವಸ್ತುಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ ಎಂದರು.
     ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ತಾಲೂಕು ಮಟ್ಟದ  ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts