More

    ಸರ್ಕಾರಿ ಶಾಲೆಗಳನ್ನು ಉಳಿಸಿ


    ಚನ್ನರಾಯಪಟ್ಟಣ: ಸಮವಸ್ತ್ರ ಹಾಗೂ ಬಿಸಿಯೂಟ ಸೇರಿದಂತೆ ಹಲವು ಸೌಲಭ್ಯಗಳೊಂದಿಗೆ ಉಚಿತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಕೆ.ಸುಧಾಕರ್ ಹೇಳಿದರು.

    ತಾಲೂಕಿನ ಪಿ.ಹೊಸಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಂಗ್ಲ ಮಾಧ್ಯಮದ ವ್ಯಾಮೋಹಕ್ಕೆ ಸಿಲುಕಿರುವ ಪಾಲಕರು ಅದರಿಂದ ಮೊದಲು ಹೊರ ಬರಬೇಕು ಎಂದರು.ಶಿಕ್ಷಣ ಸಂಯೋಜಕ ರವೀಂದ್ರ ಮಾತನಾಡಿ, ಮಕ್ಕಳ ಮನಸ್ಸು ಹಾಗೂ ಅವರ ಆಸಕ್ತಿಯನ್ನು ಗಮನಿಸಿ ಅದಕ್ಕನುಗುಣವಾದ ವ್ಯವಸ್ಥೆ ಹಾಗೂ ವಾತಾವರಣ ಕಲ್ಪಿಸಿದರೆ, ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪರೀಕ್ಷೆಯ ದಿನಗಳು ಸಮೀಪಿಸುತ್ತಿದ್ದು, ಶಿಕ್ಷಕರು ಮಕ್ಕಳ ಓದಿನತ್ತ ಮತ್ತಷ್ಟು ಹೊತ್ತು ನೀಡಬೇಕು. ಮನೆಯಲ್ಲಿ ಪಾಲಕರು ಹೆಚ್ಚು ಅಂಕಗಳನ್ನು ಪಡೆಯುವಂತೆ ಒತ್ತಡ ಹಾಕಬಾರದು. ಶಾಲೆಯಲ್ಲಿ ಸಾಕಷ್ಟು ಶಿಕ್ಷಣ ನೀಡಿ ಸಿದ್ಧರನ್ನಾಗಿ ಮಾಡಿದ್ದು ಪರೀಕ್ಷೆಯ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

    ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಪಂ ಸದಸ್ಯೆ ರೇಣುಕಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿ ಧರ್ಮಪಾಲ್, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ, ಮುಖ್ಯಶಿಕ್ಷಕಿ ಧನಲಕ್ಷ್ಮಮ್ಮ, ಸಹಶಿಕ್ಷಕ ಪುರುಷೋತ್ತಮ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts