More

    ಸರ್ಕಾರಿ ಶಾಲೆ ಜಾಗ ಒತ್ತುವರಿ ತೆರವುಗೊಳಿಸಿ

    ಚಿಕ್ಕಮಗಳೂರು: ಸರ್ಕಾರಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ಜಾಗ ಒತ್ತುವರಿಯಾಗಿದ್ದರೆ ಕೂಡಲೇ ಸರ್ವೇ ನಡೆಸಿ ಕಾಪೌಂಡ್ ನಿರ್ಮಿಸಬೇಕು. ಒತ್ತುವರಿದಾರರೂ ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿ ಸರ್ಕಾರಿ ಆಸ್ತಿ ಉಳಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯತಿಯಲ್ಲಿ ಶನಿವಾರ ನಡೆದ ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಪೌಂಡ್ ಇಲ್ಲದ ಸರ್ಕಾರಿ ಶಾಲೆ ಗುರುತಿಸಿ ಕೂಡಲೇ ನರೇಗಾ ಯೋಜನೆಯಡಿ ಕಾಪೌಂಡ್ ನಿರ್ಮಾಣ ಮಾಡಬೇಕು. ಮಕ್ಕಳಿಗೆ ತೊಂದರೆ ಉಂಟಾಗದಂತೆ ಎಚ್ಚರವಹಿಸಬೇಕು. ನರೇಗಾ ಯೋಜನೆ ಪ್ರಗತಿ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿರಬೇಕು ಎಂದು ತಿಳಿಸಿದರು.
    ಪ್ರಸಕ್ತ ಸಾಲಿನಲ್ಲಿ 28 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದ್ದು, ಇದುವರೆಗೂ ಶೇ.23 ಪ್ರಗತಿ ಸಾಧಿಸಲಾಗಿದೆ. ಶಾಲಾ ಆಟದ ಮೈದಾನ, ಕಾಂಪೌಂಡ್, ಶೌಚಗೃಹ, ಕೆರೆ ಅಭಿವೃದ್ಧಿ ಕಾಮಗಾರಿಗಳು, ರಸ್ತೆ, ಚರಂಡಿ ಸೇರಿದಂತೆ ಸಸಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ 6,61,000 ಮಾನವ ದಿನಗಳನ್ನು ಸೃಜಿಸಲಾಗಿದೆ. ಜಿಲ್ಲೆಯಲ್ಲಿ 1,74,958 ಜಾಬ್‌ಕಾರ್ಡ್‌ಗಳನ್ನು ನೀಡಲಾಗಿದ್ದು, 92,902 ಜಾಬ್‌ಕಾರ್ಡ್ ಪಡೆದವರು ಸಕ್ರಿಯವಾಗಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ಜಿಪಂ ಪ್ರಭಾರ ಉಪ ಕಾರ್ಯದರ್ಶಿ ಸೋಮಶೇಖರ್ ಮಾಹಿತಿ ನೀಡಿದರು.
    ಉಪಸಭಾಪತಿ ಎಂ.ಕೆ ಪ್ರಾಣೇಶ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಗೋಪಾಲಕೃಷ್ಣ, ಎಎಸ್ಪಿ ಕೃಷ್ಣಮೂರ್ತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts