More

    ಸರ್ಕಾರಿ ಶಾಲೆ ಮಕ್ಕಳಿಗೆ ನಿರಂತರ ಆರೋಗ್ಯ ಶಿಬಿರ: ಡಾ. ಧನಂಜಯ ಸರ್ಜಿ

    ಶಿವಮೊಗ್ಗ: ಆರ್ಥಿಕವಾಗಿ ಹಿಂದುಳಿದ ಮಕ್ಕಳೇ ಸರ್ಕಾರಿ ಶಾಲೆಗೆ ಬರುತ್ತಾರೆ. ಅವರ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಸಲುವಾಗಿಯೇ ನಿರಂತರ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ ಎಂದು ಸರ್ಜಿ ಫೌಂಡೇಷನ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.
    ಬಾಪೂಜಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಜಿ ಫೌಂಡೇಷನ್‌ನಿಂದ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ಆರೋಗ್ಯದಿಂದ ಇದ್ದರೆ ಅವರ ವಿದ್ಯಾಭ್ಯಾಸವೂ ಉತ್ತಮವಾಗಿರುತ್ತದೆ ಎಂದರು.
    ಕಾಯಿಲೆ ಬಂದ ಮೇಲೆ ವೈದ್ಯರ ಬಳಿ ಹೋಗುವುದಕ್ಕಿಂತ ಬರುವ ಮೊದಲೇ ಜಾಗೃತಿ ವಹಿಸಬೇಕು. ಈ ನಿಟ್ಟಿನಲ್ಲಿ ನಗರದ ಎಲ್ಲ ಸರ್ಕಾರಿ ಶಾಲೆಯ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ, ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಸಾಂಕ್ರಾಮಿಕ ರೋಗದ ಮುನ್ನೆಚ್ಚರಿಕೆ ಸುಲುವಾಗಿ ಟೈಫಾಯಿಡ್ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ಹಲವು ಶಾಲೆಗಳಲ್ಲಿ ಆರೋಗ್ಯ ಅರಿವು ಹಾಗೂ ತಪಾಸಣೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರು ಹಾಗೂ ಮಕ್ಕಳ ಪಾಲಕರು ಹಾಜರಿದ್ದರು.
    ಡಾ. ಧನಂಜಯ ಸರ್ಜಿ ಅವರ ನೇತೃತ್ವದಲ್ಲಿ ದಂತ ವೈದ್ಯ ಡಾ.ದೀಪಾ ಅರುಣ್ ಹಾಗೂ ಮಕ್ಕಳ ತಜ್ಞೆ ಡಾ. ರಶ್ಮಿ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಮಕ್ಕಳು ಶಿಬಿರದ ಪ್ರಯೋಜನ ಪಡೆದುಕೊಂಡರು. ಅಲ್ಲದೇ ಮಕ್ಕಳಿಗೆ ಟೈಫಾಯಿಡ್ ಲಸಿಕೆ ನೀಡಲಾಯಿತು. ಅಲ್ಲದೇ ಎಲ್ಲ ಮಕ್ಕಳಿಗೂ ವಾಟರ್ ಬಾಟಲ್‌ಗಳನ್ನು ನೀಡಲಾಯಿತು. ದಾದಿಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts