More

    ಸರ್ಕಾರ, ಪೊಲೀಸರೊಂದಿಗೆ ಸಹಕರಿಸಿ

    ಹಾವೇರಿ: ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್​ಡೌನ್ ಪಾಲನೆ, ಕರೊನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆಯಿಂದ ಶುಕ್ರವಾರ ನಗರದಲ್ಲಿ ಪೊಲೀಸ್ ರೂಟ್​ವಾರ್ಚ್ ಹಾಗೂ ಬೈಕ್ ರ‍್ಯಾಲಿ ನಡೆಸಲಾಯಿತು.

    ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಎಸ್​ಪಿ ಕೆ.ಜಿ. ದೇವರಾಜ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿ, ಕರೊನಾ ಲಾಕ್​ಡೌನ್ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ರೂಟ್​ವಾರ್ಚ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಈಗಾಗಲೇ ಸವಣೂರು, ಶಿಗ್ಗಾಂವಿ, ತೆಗ್ಗಿಹಳ್ಳಿ, ಬಂಕಾಪುರಗಳಲ್ಲಿ ರ‍್ಯಾಲಿ ನಡೆಸಲಾಗಿದೆ. ಶುಕ್ರವಾರ ಹಾವೇರಿ, ಬ್ಯಾಡಗಿ, ಕಾಗಿನೆಲೆಯಲ್ಲಿ ರ‍್ಯಾಲಿ ನಡೆಸಲಾಗುತ್ತಿದೆ ಎಂದರು.

    ಕರೊನಾ ವೈರಸ್ ತಡೆಗಟ್ಟಲು ಸರ್ಕಾರ ಹಾಗೂ ಇಲಾಖೆಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು. ಜಿಲ್ಲೆಯ ಎಲ್ಲ ನಗರಗಳಲ್ಲಿ ರೂಟ್​ವಾರ್ಚ್ ನಡೆಸಿ ಜನರಿಗೆ ಆತ್ಮವಿಶ್ವಾಸದೊಂದಿಗೆ ಲಾಕ್​ಡೌನ್ ನಿಯಮಗಳ ಪಾಲನೆ, ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ಸಾಮಗ್ರಿಗಳ ಖರೀದಿ, ಅನಗತ್ಯವಾಗಿ ಓಡಾಡದಂತೆ ತಿಳಿವಳಿಕೆ ಮೂಡಿಸಲಾಗುವುದು ಎಂದರು.

    ಹೊಸಮನಿ ಸಿದ್ದಪ್ಪ ವೃತ್ತದಿಂದ ಗುತ್ತಲ ರಸ್ತೆ ಮಾರ್ಗವಾಗಿ ಹೊರಟ ರ‍್ಯಾಲಿ ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. 100 ಬೈಕ್​ಗಳು, 20 ನಾಲ್ಕು ಚಕ್ರದ ವಾಹನಗಳು ಹಾಗೂ 250 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಎಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿಎಸ್​ಪಿ ವಿಜಯಕುಮಾರ ಸಂತೋಷ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts