More

    ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಪರ : ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕುರುಬೂರು ಸಿದ್ದೇಶ್ ಆರೋಪ



    ಮೈಸೂರು : ಕಬ್ಬಿನ ಎಫ್‌ಆರ್‌ಪಿ ದರ ಅವೈಜ್ಞಾನಿಕವಾಗಿದ್ದು, ಪ್ರತಿ ಕ್ವಿಂಟಾಲ್‌ಗೆ 10 ರೂ. ಹೆಚ್ಚಿಸಿ ಕಬ್ಬು ಬೆಳೆಗಾರರಿಗೆ ಅನ್ಯಾಯ ಮಾಡಿ, ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಸರ್ಕಾರ ನಿಂತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕುರುಬೂರು ಸಿದ್ದೇಶ್ ಆರೋಪಿಸಿದರು.


    ರೈತರು ಕಬ್ಬು ಬೆಳೆಯಲು ರಸಗೊಬ್ಬರ, ಕೂಲಿ, ಸಾಗಣೆ ವೆಚ್ಚ ಪ್ರತಿ ವರ್ಷವೂ ಹೆಚ್ಚಾಗುತ್ತಿದೆ. ಆದ್ದರಿಂದ ಎಫ್‌ಆರ್‌ಪಿ ದರವನ್ನು ಮರು ಪರಿಶೀಲಿಸಿ ರೈತರಿಗೆ ವೈಜ್ಞಾನಿಕ ಬೆಲೆ ಕೋಡಿಸಬೇಕು, ಕಬಿನಿ ಬಲದಂಡೆ ನಾಲೆಯಲ್ಲಿ ಹೂಳು ತುಂಬಿದ್ದು ತಕ್ಷಣದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ನಾಲೆಗಳ ಹೂಳು ತಗೆಸುವ ಕಾಮಗಾರಿ ಪ್ರಾರಂಭಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.


    ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್ ಕೊಡುತೇವೆ ಎಂದು ಸರ್ಕಾರ ಹೇಳುತ್ತದೆ. ಆದರೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ.್ಲ ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ಸರ್ಕಾರ 15 ದಿನ ಒಳಗೆ ಬಗೆಹರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಂದು ಎಚ್ಚರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿರುಗಸೂರು ಶಂಕರ್, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್ ನಾಯಕ್, ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಟೌನ್ ಅಧ್ಯಕ್ಷ ಅಪ್ಪಣ್ಣ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts