More

    ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ


    ರೈತರಿಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಸಲಹೆ


    ಗುಂಡ್ಲುಪೇಟೆ: ಕೃಷಿ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ರೈತರಿಗೆ ಸಲಹೆ ನೀಡಿದರು.

    ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಜೀವನೋಪಾಯ ಆದಾಯ ಉತ್ಪನ್ನ ಚಟುವಟಿಕೆಯ ವಿವಿಧ ಸವಲತ್ತುಗಳನ್ನು ಬುಧವಾರ ವಿತರಿಸಿ ಮಾತನಾಡಿದರು.

    ರೈತರ ಅನುಕೂಲಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ ಮುಂತಾದ ಇಲಾಖೆಗಳ ಮೂಲಕ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಮೇವು ಕತ್ತರಿಸುವ ಯಂತ್ರ, ರಾಸುಗಳ ನೆಲಹಾಸು, ರಸಮೇವು ಘಟಕ, ಜೇನುಪೆಟ್ಟಿಗೆ, ಕುಕ್ಕುಟ ಉದ್ಯಮಕ್ಕೆ ಕೋಳಿ ಮೀನಿನ ಮರಿಗಳ ವಿತರಣೆ ಸೇರಿದಂತೆ ನಾನಾ ಸವಲತ್ತುಗಳನ್ನು ನೀಡುತ್ತಿದ್ದು, ಇವುಗಳನ್ನು ಸರಿಯಾಗಿ ಉತ್ಪಾದಕ ಕಾರ್ಯಗಳಿಗೆ ಬಳಸಿಕೊಂಡಲ್ಲಿ ರೈತರು ಸ್ವಾವಲಂಬಿಗಳಾಗಲು ಸಾಧ್ಯ ಎಂದರು.

    ಕೃಷಿಕ ಸಮಾಜದ ಅಧ್ಯಕ್ಷ ಕೆ.ಸಿ.ಮಧು, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಸಹಾಯಕ ಕೃಷಿ ನಿರ್ದೇಶಕ ಪ್ರವೀಣ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿವೇಕ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts