More

    ಸಸಿ ಜೋಪಾನ ಆದ್ಯತೆಯಾಗಲಿ

    ಧಾರವಾಡ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಸಿಗಳನ್ನು ನೆಡುವ ಮೂಲಕ ಪರಿಸರದ ಸಮತೋಲನ ಕಾಪಾಡಬೇಕು. ಪ್ರತಿ ವರ್ಷ ವಿವಿಧ ರೀತಿಯ ಲಕ್ಷಾಂತರ ಸಸಿಗಳನ್ನು ಸರ್ಕಾರಿ ಜಮೀನು, ರಸ್ತೆ ಪಕ್ಕ, ಸರ್ಕಾರಿ ಕಚೇರಿಗಳ ಆವರಣದಲ್ಲಿ ನೆಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

    ವಿಶ್ವ ಪರಿಸರ ದಿನ ಅಂಗವಾಗಿ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಸಿಗಳನ್ನು ಜೋಪಾನ ಮಾಡುವುದು ನಮ್ಮ ಆದ್ಯತೆ ಆಗಬೇಕು. ವಿಶೇಷವಾಗಿ ಔಷಧ ಹಾಗೂ ಗಿಡಮೂಲಿಕೆ ಸಸಿಗಳನ್ನು ಕಚೇರಿ ಆವರಣದಂಥ ಸುರಕ್ಷಿತ ಸ್ಥಳಗಳಲ್ಲಿ ನೆಡುವುದರಿಂದ ಹೆಚ್ಚು ಲಾಭವಾಗುತ್ತದೆ ಎಂದರು.

    ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯಲ್ಲಿನ ಎಲ್ಲ ಅಧೀನ ಕಚೇರಿಗಳ ಆವರಣದಲ್ಲಿ ಜೂನ್ ತಿಂಗಳ ಅಂತ್ಯದೊಳಗೆ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

    ಉಪ ವಿಭಾಗಾಧಿಕಾರಿ ಮಹಮ್ಮದ್ ಜುಬೇರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ. ರಾಮಚಂದ್ರ ಕೆ.ಎಂ., ಗ್ರೇಡ್-2 ತಹಸೀಲ್ದಾರ್ ಪಿ.ಎ. ಪಾಟೀಲ, ಶಿರಸ್ತೇದಾರ್ ಪಿ.ಎಸ್. ಪೂಜಾರ, ಹೋಬಳಿ ಕಂದಾಯ ನಿರೀಕ್ಷಕ ಮಂಜುನಾಥ ಗೂಳಪ್ಪನವರ, ಉಪತಹಸೀಲ್ದಾರ್, ಕಂದಾಯ ನಿರೀಕ್ಷಕರು, ಸಿಬ್ಬಂದಿ, ಇತರರು ಇದ್ದರು.

    ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಲವು ಸಸಿಗಳನ್ನು ನೆಡಲಾಗಿದೆ. ಕಚೇರಿ ಹಿಂಭಾಗದಲ್ಲಿ ಖಾಲಿ ಇರುವ ಜಾಗದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಕಚೇರಿಗೆ ಆಗಮಿಸುವ ಜನರಿಗೆ ಅನುಕೂಲವಾಗುವಂತೆ ಚಿಕ್ಕ ಉದ್ಯಾನ ರೂಪಿಸಲಾಗುವುದು. ತಾಲೂಕಿನಲ್ಲಿರುವ ನಾಡ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಕಚೇರಿಗಳ ಆವರಣದಲ್ಲಿ ಸಸಿಗಳನ್ನು ನೆಡಲಾಗುವುದು. | ಸಂತೋಷ ಬಿರಾದಾರ ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts