More

    ಸಸಿ ನೆಟ್ಟು ಪರಿಸರ ಕಾಪಾಡಿ

    ರಾಯಬಾಗ: ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪರಿಸರ ಕಾಪಾಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲೂಕಿನ ಭೆಂಡವಾಡ ಗ್ರಾಮದ ರೇವಣಸಿದ್ದೇಶ್ವರ ಮಠದ ಆವರಣದಲ್ಲಿ ಚಿಕ್ಕೋಡಿ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಹಾಗೂ ರಾಯಬಾಗ ರೈತ ಮೋರ್ಚಾ ಮಂಡಲ ಸಹಯೋಗದಲ್ಲಿ ಡಾ.ಶ್ಯಾಮಾಪ್ರಸಾದ ಮುಖರ್ಜಿ ಪುಣ್ಯ ಸ್ಮರಣೆ ನಿಮಿತ್ತ ಶನಿವಾರ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಪರಿಸರ ರಕ್ಷಣೆಗೆ ಬಿಜೆಪಿಯಿಂದ ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭೆಂಡವಾಡ ಗ್ರಾಮದಲ್ಲಿ ಸುಮಾರು 2,000 ಸಸಿಗಳನ್ನು ನೆಡಲಾಗುತ್ತಿದೆ. ಇಲ್ಲಿನ ಬಿಜೆಪಿ ಕಾರ್ಯಕರ್ತರು ಅವುಗಳನ್ನು ಪೋಷಿಸುತ್ತಾರೆ ಎಂದರು.

    ಶಾಸಕ ಡಿ.ಎಂ. ಐಹೊಳೆ ಮಾತನಾಡಿ, ಬಿಜೆಪಿ ಹಮ್ಮಿಕೊಂಡಿರುವ ಸಸಿ ನೆಡುವ ಕಾರ್ಯಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ರಾಯಬಾಗ ಮತಕ್ಷೇತ್ರದ ಎಲ್ಲ ಗ್ರಾಮಗಳಲ್ಲಿ ಸಸಿ ನೆಡುವ ಕೆಲಸ ನಡೆಯಬೇಕು. ಈ ಕಾರ್ಯಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದರು.

    ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಭೆಂಡವಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುಸಿದ್ಧೇಶ್ವರ ವಿರಕ್ತಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ಗ್ರಾಪಂ ಅಧ್ಯಕ್ಷ ಅಪ್ಪು ಬಾನೆ, ಜಿಪಂ ಸದಸ್ಯ ನಿಂಗಪ್ಪ ಪಕಾಂಡಿ, ಸತೀಶ ಕಡಾಡಿ, ಸದಾಶಿವ ಹುಂಜ್ಯಾಗೋಳ, ಸತೀಶ್ ಅಪ್ಪಾಜಿಗೋಳ, ಸತ್ಯಪ್ಪ ನಾಯಿಕ, ಸದಾನಂದ ಹಳಿಂಗಳಿ, ರಾಜಶೇಖರ ಖನದಾಳೆ, ಅಪ್ಪಾಸಾಬ ಬ್ಯಾಕುಡೆ, ಮಲ್ಲಿಕಾರ್ಜುನ ಬಾಳಿಕಾಯಿ, ಮಹೇಶ ಖೇತಗೌಡರ, ಬಸವರಾಜ ಅಜೂರ, ದೀಪಕ ಪಾಟೀಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts