More

    ಸಹಕಾರದಿಂದ ಸಮಸ್ಯೆ ನಿವಾರಣೆ ಸಾಧ್ಯ

    ಗೋಕಾಕ: ಸಮನ್ವಯದಿಂದ ಇಲಾಖೆಯೊಂದಿಗೆ ಕಾರ್ಯನಿರ್ವಹಿಸಿದರೆ ಸಮಸ್ಯೆಗಳಿಗೆ ಸಕಾಲಕ್ಕೆ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಹೇಳಿದ್ದಾರೆ.

    ನಗರದ ತಾಪಂ ಸಭಾಂಗಣದಲ್ಲಿ ತಾಲೂಕಾಡಳಿತ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರ ಯೋಗಕ್ಷೇಮ ಹಾಗೂ ಹಿತರಕ್ಷಣಾ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

    ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕರೊನಾ ಕಾರಣ ಇಷ್ಟು ದಿನ ಸಭೆ ನಡೆದಿರಲಿಲ್ಲ. ಇನ್ನು ಮೇಲೆ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಹೈಕೋರ್ಟ್ ಆದೇಶದಂತೆ ತಾಲೂಕಿನ ಧೂಪದಾಳ ಗ್ರಾಮದ ಸರ್ವೇ ನಂ 120 ಮತ್ತು 121ರಲ್ಲಿ ನೀರಾವರಿ ಇಲಾಖೆಗೆ ಸಂಬಂಧಪಟ್ಟ 18 ಮನೆಗಳನ್ನು ತೆರವುಗೊಳಿಸಲಾಗಿದೆ. ಸಂಬಂಧಿಸಿದ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತೆರವು ಮಾಡಲಾಗಿದೆ. ಅಲ್ಲಿ ವಾಸವಿದ್ದ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

    ಪೌರಾಯುಕ್ತ ಶಿವಾನಂದ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ವಿ.ಕಲಪ್ಪನವರ, ತಳದಪ್ಪ ಅಮ್ಮಣಗಿ, ವೀರಭದ್ರ ಮೈಲಣ್ಣವರ, ಅಜಿತ ಹರಿಜನ, ಗೋವಿಂದ ಕಳ್ಳಿಮನಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts