More

    ಸಹಕಾರ ಕ್ಷೇತ್ರದ ತಿದ್ದುಪಡಿಗಳ ಅರಿವು ಅಗತ್ಯ

    ಚಿಕ್ಕಮಗಳೂರು: ಸಹಕಾರ ಕ್ಷೇತ್ರದಲ್ಲಿ ನಾವು ಎಷ್ಟು ತಿಳಿದುಕೊಂಡರೂ ಸಾಲದು. ಕಾಲಕ್ಕೆ ತಕ್ಕಂತೆ ಸರ್ಕಾರ ಸಹಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಅವುಗಳ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ.ಲೋಕಪ್ಪ ಗೌಡ ಹೇಳಿದರು. ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆಸಬೇಕಾದರೆ ಇಂತಹ ತರಬೇತಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಬೇಕು ಎಂದರು.

    ಜಿಲ್ಲೆಯ ಪಿಎಸಿಎಸ್, ಟಿಎಪಿಸಿಎಂಎಸ್ ಅಧ್ಯಕ್ಷರು, ಸಿಇಒಗಳಿಗೆ ಸಹಕಾರ ವಲಯದಲ್ಲಿ ಇತ್ತೀಚಿನ ಬೆಳವಣಿಗೆಗಳು, ಆಡಳಿತ ನಿರ್ವಹಣೆ ಸಹಕಾರ ಕಾಯ್ದೆ ತಿದ್ದುಪಡಿ, ಸಹಕಾರ ಸಂಘಗಳ ಅಭಿವೃದ್ಧಿಗೆ ಪೂರಕ ಆರ್ಥಿಕ ವ್ಯವಹಾರಗಳ ಕಾರ್ಯದಕ್ಷತೆ, ಫ್ರೂಟ್ಸ್ ತಂತ್ರಜ್ಞಾನ, ಡಿಜಿಟಲ್ ಬ್ಯಾಂಕಿಂಗ್, ಜಿಎಸ್​ಟಿ, ತೆರಿಗೆ, ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಬಗ್ಗೆ ಅರಿವು ಹೊಂದಿ ಸಹಕಾರ ಸಂಘಗಳ ಬೆಳವಣಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು.

    ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಡಾ. ಜಿ.ಎಸ್.ಮಹಾಬಲ ಮಾತನಾಡಿ, ಬದಲಾವಣೆಗೆ ಹೊಂದಿಕೊಂಡು ಅದಕ್ಕೆ ತಕ್ಕಂತೆ ತರಬೇತಿ ಪಡೆದುಕೊಳ್ಳಬೇಕು. ಯಾವ ವ್ಯವಹಾರವನ್ನೂ ನಮ್ಮ ಅನುಕೂಲಕ್ಕೆ ತಕ್ಕಂತೆ ಮಾಡದೆ ಸಹಕಾರ ಕಾಯ್ದೆ ಮತ್ತು ನಿಯಮಗಳಿಗೆ ಅನುಗುಣವಾಗಿ ನಿರ್ವಹಿಸಬೇಕು. ಮಹಾಮಂಡಳ ಹಾಗೂ ಯೂನಿಯನ್ ಆಯೋಜಿಸುವ ತರಬೇತಿಗಳಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts