More

    ಸಹಪಠ್ಯ ಚಟುವಟಿಕೆಯಿಂದ ಕಲಿಕೆಯಲ್ಲಿ ದೃಢತೆ

    ದಾವಣಗೆರೆ: ದೇಶೀಯ ಕ್ರೀಡೆಗಳು ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

    ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿ.ಎಸ್. ಪ್ಯಾರಾ ಮೆಡಿಕಲ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ಕಾಲೇಜಿನ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು.
    ವಿದ್ಯಾರ್ಥಿಗಳಿಗೆ ಪಠ್ಯದಂತೆ ಸಹಪಠ್ಯ ಚಟುವಟಿಕೆಗಳೂ ಮುಖ್ಯ. ಹಾಗಾದಾಗ ಮಾತ್ರ ಕಲಿಕೆಯಲ್ಲಿ ದೃಢತೆ ಕಾಣಬಹುದು. ಕ್ರೀಡಾಕೂಟದಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಬೇಕು. ಸರ್ಕಾರ, ಶಿಕ್ಷಣ ಸಂಸ್ಥೆ ಮತ್ತು ಸಂಘ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.
    ಭಾರತ 135 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿದ್ದು ದೇಶದ ಕ್ರೀಡಾಪಟುಗಳು ವಿಶ್ವದ ಎಲ್ಲ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಅಗ್ರಸ್ಥಾನ ಪಡೆಯುವಂತಾಗಬೇಕು ಎಂದು ಆಶಿಸಿದರು.
    ಸಂಸ್ಥೆಯ ಮುಖ್ಯಸ್ಥ ರಂಗನಾಥ್, ಉಪನ್ಯಾಸಕರಾದ ಶಿಲ್ಪಾಚಾರ್, ಪ್ರಭು ಇತರರು ಇದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts