More

    ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಚನ್ನಮ್ಮಾಜಿ ಹೆಸರಿಡಿ

    ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ ಹೆಸರಿಡಬೇಕು ಎಂದು ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ಒತ್ತಾಯಿಸಿದರು. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮಾಜಿ ಹೆಸರು ಇಡಬೇಕು ಎಂದು 2007ರಿಂದ ಸುಮಾರು 17 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ.

    ಆದರೆ, ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಬೇಕು ಎಂದು ಕ್ಯಾಬಿನೇಟ್ ಸಭೆ ಕರೆದು ನಿರ್ಣಯ ಕೈಗೊಂಡರು. ಒಬ್ಬ ಮಾಜಿ ಮುಖ್ಯಮಂತ್ರಿ ಹೆಸರಿಡಲು ವೇಗವಾಗಿ ನಿರ್ಣಯ ಕೈಗೊಂಡರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀಬಸವೇಶ್ವರರ ಹೆಸರನ್ನು ನಾಮಕರಣ ಮಾಡಿದ್ದಾರೆ. ಇದಕ್ಕೆ ಕನ್ನಡಪರ ಸಂಘಟನೆಗಳು ಸ್ವಾಗತಿಸುತ್ತವೆ ಎಂದರು.

    17 ವರ್ಷಗಳಿಂದ ಹೋರಾಟ ಮಾಡುತ್ತಿರುವಾಗ ಕಿತ್ತೂರು ಉತ್ಸವ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮಾಜಿ ಹೆಸರು ಘೋಷಿಸಬೇಕಿತ್ತು. ಆದರೆ, ಸರ್ಕಾರ ಹಿಂದೇಟು ಹಾಕುತ್ತಿದೆ. ಎಂಬ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಬೇಕು. ಕೂಡಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರಿಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಕಾಶ ಶಿರೋಳಕರ, ಮಲ್ಲಪ್ಪ ಸೊಂಟಕ್ಕಿ, ಸತೀಶ ಗುಡಗನಟ್ಟಿ, ವಾಜೀದ ಹಿರೇಕೋಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts