More

    ಸಾಂಸ್ಕೃತಿಕ, ಜನಪದ ಉತ್ಸವ 27ರಂದು

    ಬೀದರ್: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷಾಚರಣೆ ಹಾಗೂ ಸಾಂಸ್ಕೃತಿಕ ಮತ್ತು ಜನಪದ ಉತ್ಸವ 27, 28ರಂದು ಇಲ್ಲಿನ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ.

    ಕಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಕನರ್ಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಡಿ ಉತ್ಸವ ನಡೆಯಲಿದೆ. 27ರಂದು ಬೆಳಗ್ಗೆ 8.30ಕ್ಕೆ ಡಾ.ಅಂಬೇಡ್ಕರ್ ವೃತ್ತದಿಂದ ರಂಗಮಂದಿರವರೆಗೆ ಕಲಾ ತಂಡಗಳ ಭವ್ಯ ಮೆರವಣಿಗೆಗೆ ಡಿಸಿ ಗೋವಿಂದರಡ್ಡಿ ಚಾಲನೆ ನೀಡುವರು. ಎಸ್ಪಿ ಡಿ.ಕಿಶೋರಬಾಬು ಇತರರು ಭಾಗವಹಿಸುವರು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    10.30ಕ್ಕೆ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ಕುಮಾರ ಉತ್ಸವ ಉದ್ಘಾಟಿಸುವರು. ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ ಮಲ್ಕಾಪೂರೆ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾನ್ ಇತರರು ಭಾಗವಹಿಸುವರು. ಕನರ್ಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಗೌರವ ಅಭಿನಂದನೆ ನಡೆಯಲಿದೆ. ಈ ವೇಳೆ 38 ಸಾಧಕರಿಗೆ ಕಲ್ಯಾಣ ಕರ್ನಾಟಕ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

    28ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿವಿಧ ಗೋಷ್ಠಿಗಳು ನಡೆಯಲಿವೆ. 3ಕ್ಕೆ ಸಮಾರೋಪವಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಮಾರೋಪ ಭಾಷಣ ಮಾಡುವರು ಎಂದು ಹೇಳಿದರು.

    ಡಿಂಗ್ರಿ ನರೇಶ, ಅಮರೇಶ ಹಸ್ಮಕಲ್, ಸುನೀಲ ಕಡ್ಡೆ, ಸಂಗಮೇಶ ಬೆಲ್ದಾಳ, ಏಸುದಾಸ ಅಲಿಯಂಬುರೆ, ಶರಣು ಗೌಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts