More

    ಸಾಕ್ಷರತಾ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ ನೀಡಿ

    ಯಾದಗಿರಿ: ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿಶೇಷ ಗಮನ ನೀಡುವ ಮೂಲಕ ಸಕರ್ಾರದ ಉದ್ದೇಶ ಈಡೇರಿಕೆಗೆ ಅಧಿಕಾರಿ ವರ್ಗ ಶ್ರಮಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಮನೋಜ್ ಜೈನ್ ಸೂಚನೆ ನೀಡಿದ್ದಾರೆ.

    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 2323 ಪೂಣರ್ಾವಧಿ ಶಿಕ್ಷಕರು, 2300 ಅತಿಥಿ ಶಿಕ್ಷಕರು, ಕರ್ತವ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಶಿಕ್ಷಕರು ಇರುವುದರಿಂದ ಶಿಕ್ಷಣ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ವಿಶೇಷವಾಗಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಕ್ರಮವನ್ನು ರೋಪಿಸುವಂತೆ ನಿದರ್ೇಶನ ನೀಡಿದರು.

    ಶಾಲಾ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ, ದಾಖಲಾತಿ ನಿರ್ವಹಣೆ ಹಾಗೂ ಶಾಲೆಯಿಂದ ಮಕ್ಕಳು ಹೊರಗೆ ಉಳಿಯದಂತೆ ನೋಡಿಕೊಳ್ಳಲು ಈಗಾಗಲೇ ಎಲ್ಲ ಶಾಲಾ ಮುಖ್ಯೋಪಾಧ್ಯಯರಿಗೆ ತರಬೇತಿ ನೀಡಲಾಗುತ್ತಿದೆ. ಅದರಂತೆ ಕಲ್ಯಾಣ ಕನರ್ಾಟಕ ಅಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಶಿಕ್ಷಕರನ್ನು ಒದಗಿಸಲಾಗಿದೆ. ಕಾರಣ ಪ್ರತಿ ತಿಂಗಳು ತಲಾ 10 ರಂತೆ ಅನಕ್ಷರಸ್ಥರನ್ನು ಗುರುತಿಸಿ ಸಾಕ್ಷರರನ್ನಾಗಿ ಮಾಡಲು ವಿಶೇಷ ಗಮನ ನೀಡಬೇಕು. ಜಿಲ್ಲೆಯಲ್ಲಿ ಸದ್ಯ ಶೇ.51 ರಷ್ಟು ಸಾಕ್ಷರತಾ ಪ್ರಮಾಣವಿದೆ. ಸಕರ್ಾರೇತರ ಸಂಘ ಸಂಸ್ಥೆಗಳು, ವಿದ್ಯಾಥರ್ಿಗಳ ಸಹಕಾರದೊಂದಿಗೆ ಸಾಕ್ಷರತಾ ಪ್ರಮಾಣ ಹೆಚ್ಚಿಸಬೇಕು ಎಂದರು.

    ಹೊಬಳಿವಾರು ವಿಕಲಚೇತನರನ್ನು ಗುರುತಿಸಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸಕಾಲಕ್ಕೆ ಅವರಿಗೆ ಸಾಧನ,ಸಲಕರಣೆ ಒದಗಿಸಲು ಕ್ರಮ ಕೈಕೊಳ್ಳಬೇಕು. ಅನಿಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಹಳೆ ಜಿಲ್ಲಾ ಆಸ್ಪತ್ರೆಯ ರೆಡ್ಕ್ರಾಸ್ ಘಟಕ ವ್ಯಾಪ್ತಿಯಲ್ಲಿ ಬ್ಲೆಡ್ಬ್ಯಾಂಕ್ ಸದ್ಭಳಕೆ ಮಾಡಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಐಸಿಡಿಎಸ್ ಕಾರ್ಯಕ್ರಮದಡಿ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts