More

    ಸಾಗರ ಉಪವಿಭಾಗೀಯ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ: ಡಾ. ಕೆ.ಸಿ.ನಾರಾಯಣ ಗೌಡ

    ಸಾಗರ: ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಗಮನಹರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ತಿಳಿಸಿದರು.
    ಉಪವಿಭಾಗೀಯ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಮಾತನಾಡಿ, ಮಂಗಳವಾರ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಶಾಸಕ ಹಾಲಪ್ಪ ಸೇರಿದಂತೆ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಸಭೆ ನಡೆಸಿ ಸಾಗರ ಆಸ್ಪತ್ರೆಯನ್ನು 250 ಹಾಸಿಗೆ ಸಾಮರ್ಥ್ಯಕ್ಕೆ, ತಾಯಿಮಗು ಆಸ್ಪತ್ರೆಯನ್ನು 150 ಹಾಸಿಗೆ ಸಾಮರ್ಥ್ಯಕ್ಕೆ ಏರಿಸುವುದು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಎಲ್ಲ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.
    ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಜಿಲ್ಲೆಯಲ್ಲದೆ ಅಕ್ಕಪಕ್ಕದ ಜಿಲ್ಲೆಗಳಿಂದ ಸಹ ರೋಗಿಗಳು ತಪಾಸಣೆಗೆ ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಉತ್ತಮ ಸೇವೆಯೇ ಇದಕ್ಕೆ ಕಾರಣವಾಗಿದೆ. ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ನಾಲ್ಕೈದು ಡಯಾಲಿಸಿಸ್ ಯಂತ್ರ ಇರುತ್ತದೆ. ಇಲ್ಲಿ 9 ಡಯಾಲಿಸಿಸ್ ಯಂತ್ರವಿದ್ದು ಹೆಚ್ಚುವರಿ ಡಯಾಲಿಸಿಸ್ ಯಂತ್ರದ ಬೇಡಿಕೆ ಈಡೇರಿಸಲಾಗಿದೆ. ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರತೆ ಇರುವ ವೈದ್ಯರನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗಿದ್ದು ಮೆಡಿಕಲ್ ಕಾಲೇಜು, ಎಂಡಿ. ಮಾಡಿರುವವರು ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಸೇವೆ ಸಲ್ಲಿಸಬೇಕು ಎಂದು ನಿಯಮ ರೂಪಿಸಿದ್ದರಿಂದ ಶೀಘ್ರದಲ್ಲೇ ವೈದ್ಯರ ಕೊರತೆ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಥ್ಯಾಹಾರ ಟೆಂಡರ್ ಲೋಪದ ಬಗ್ಗೆ ಸಹ ಬೆಂಗಳೂರಿನ ಸಭೆಯಲ್ಲಿ ಆರೋಗ್ಯ ಸಚಿವರ ಗಮನ ಸೆಳೆಯಲಾಗುತ್ತದೆ ಎಂದು ಹೇಳಿದರು.
    ಶಾಸಕ ಹಾಲಪ್ಪ ಹರತಾಳು ಮಾತನಾಡಿ, ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಿದ್ದಾರೆ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ತಕ್ಷಣ ಗಮನ ಹರಿಸಲಾಗುತ್ತಿದೆ. ಈಗಾಗಲೆ ಸರ್ಕಾರ ಮತ್ತು ಆರೋಗ್ಯ ಸಚಿವರ ಗಮನಕ್ಕೆ ಆಸ್ಪತ್ರೆಯ ಮೂಲಭೂತ ಸೌಲಭ್ಯ ಕೊರತೆ ಬಗ್ಗೆ ತಿಳಿಸಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts