More

    ಸಾಗರ: ಮಾರಿಜಾತ್ರೆ ಮರ ಕಡಿಯುವ ಶಾಸ್ತ್ರಕ್ಕೆ ಚಾಲನೆ; ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿ

    ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಯ ಸಿದ್ಧತೆಗಳು ಆರಂಭವಾಗಿದ್ದು, ಮಂಗಳವಾರ ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸಿ ಮರ ಕಡಿಯುವ ಶಾಸ್ತ್ರಕ್ಕೆ ಚಾಲನೆ ನೀಡಲಾಯಿತು. ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
    ಬೆಳಗ್ಗೆ ಪೋತರಾಜ ರವಿ ಪೂಜಾರ್ ಮನೆಯಲ್ಲಿ ಸಾಂಪ್ರದಾಯಿಕ ಪೂಜೆಯ ಮೂಲಕ ಜಾತ್ರೆಗೆ ವಿಧ್ಯಕ್ತವಾಗಿ ಚಾಲನೆ ನೀಡಲಾಯಿತು. ನಂತರ ದೇವಸ್ಥಾನಕ್ಕೆ ತೆರಳಿ ಸಕಲ ಭಕ್ತರ ಸಮ್ಮುಖದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು.
    ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣದಿಂದ ಹೊರಟ ಮೆರವಣಿಗೆ ರೈಲ್ವೇ ಗೇಟ್ ಸಮೀಪದಲ್ಲಿ ಇರುವ ಹಲಸಿನ ಮರವನ್ನು ಪೋತರಾಜ ಸೂಚಿಸಿದ ಮೇರೆಗೆ ಮರ ಕಡಿಯುವ ಶಾಸ್ತ್ರ ನಡೆಸಲಾಯಿತು. ಸಹಸ್ರಾರು ಭಕ್ತರು ಮೆರವಣಿಗೆಯುದ್ದಕ್ಕೂ ಪಾಲ್ಗೊಂಡಿದ್ದರು. ಅದಕ್ಕೂ ಮುನ್ನ ಸಾಗರದ ಅಶೋಕ ರಸ್ತೆಯಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ಪೋತರಾಜನಿಗೆ ವಿಶೇಷ ಪೂಜೆ ನಡೆಸಲಾಯಿತು. ಪೋತರಾಜನ ಮನೆಯ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಾಗರದ ಜಾತ್ರೆ ಕರ್ನಾಟಕ ರಾಜ್ಯದಲ್ಲಿಯೇ ಅತ್ಯಂತ ವೀಶೇಷವಾದದ್ದು ಈ ಜಾತ್ರೆಗಾಗಿ ಜನ ಕಾಯುತ್ತಿರುತ್ತಾರೆ. ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಜಾತ್ರೆಗೆ ಭಕ್ತರು ಆಗಮಿಸುತ್ತಾರೆ ಎಂದರು.
    ದೇವಸ್ಥಾನದ ಆವರಣದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಅರ್ಚಕ ಮಧುಕರ್ ಭಟ್, ರಮೇಶ್ ಭಟ್ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
    ಜಾತ್ರೆ ಕ್ಯಾಲೆಂಡರ್ ಬಿಡುಗಡೆ: ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಜಾತ್ರೆಯ ವಿವಿಧ ವಿಶೇಷತೆ ಮತ್ತು ವೈವಿಧ್ಯತೆಗಳನ್ನು ಒಳಗೊಂಡ 2023ನೇ ಸಾಲಿನ ಹೊಸ ವರ್ಷದ ಕ್ಯಾಲೆಂಡರನ್ನು ತವರು ಮನೆಯ ಶ್ರೀ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಮಂಗಳವಾರ ಬಿಡುಗಡೆಗೊಳಿಸಿದರು. ಜಾತ್ರೆಯ ಧಾರ್ಮಿಕ ಕಾರ್ಯ ಆರಂಭಗೊಂಡಿದ್ದು ಲಕ್ಷಾಂತರ ಜನರು ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರಸಭೆಯು ಜಾತ್ರೆಯ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಿದೆ. ಸ್ವಚ್ಛತೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ಎಲ್ಲ ವ್ಯವಸ್ಥೆಗೆ ಅಗತ್ಯಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾತನಾಡಿ, ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ಸಮಿತಿಯು ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು 2023ರ ಹೊಸ ವರ್ಷದ ಹಿನ್ನೆಲೆಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ಫೋಟೋದೊಂದಿಗೆ ಕ್ಯಾಲೆಂಡರ್ ತಯಾರಿಸಲಾಗಿದೆ. ಜಾತ್ರೆಯ ಅಂಗವಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಫೆಬ್ರವರಿ 7ರಿಂದ ಆರಂಭವಾಗುವ ಜಾತ್ರೆಗೆ ಊರಿಗೆ ಊರೇ ಸಿಂಗಾರಗೊಳ್ಳುತ್ತಿದೆ. ಜನತೆಯ ಸಹಕಾರ, ಸಮಿತಿಯ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಜಾತ್ರೆ ನಡೆಸಲಾಗುವುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts