More

    ಸಾಗುವಳಿದಾರರ ಒಕ್ಕಲೆಬ್ಬಿಸಲು ಬಿಡಲ್ಲ; ಸಿಎಂ, ಎಜಿ, ಅಧಿಕಾರಿಗಳ ಜತೆ ಚರ್ಚೆ: ಬಿ.ವೈ.ರಾಘವೇಂದ್ರ

    ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಸಿರಿರುವವರೆಗೆ ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸಂಕಲ್ಪ ಮಾಡಿದ್ದಾರೆ. ಅದರಂತೆ ನಿರಂತರ ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
    ಕಳೆದ ಶನಿವಾರ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳು ,ಅಡ್ವೋಕೇಟ್ ಜನರಲ್, ಮುಖ್ಯ ಅರಣ್ಯಾಧಿಕಾರಿಗಳ ಜತೆಗೆ ಬಗರ್‌ಹುಕುಂ, ಅರಣ್ಯ ಸಾಗುವಳಿ, ಕಂದಾಯ ಭೂಮಿಯಲ್ಲಿ ಸಾಗುವಳಿ ವಿಚಾರದಲ್ಲಿ ಚರ್ಚಿಸಲಾಗಿದೆ. ಸರ್ಕಾರ ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸರ್ಕಾರ ರೈತರ ಒತ್ತುವರಿ ಸಮಸ್ಯೆ ಬಗೆಹರಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ಈ ನಡುವೆ ಅರಣ್ಯ ಮತ್ತು ಕಂದಾಯ ಅಧಿಕಾರಿಗಳು ರೈತರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗಿಸಲು ಮುಂದಾದರೆ ಅವರ ವಿರುದ್ಧವೇ ನಾವು ಹೋರಾಟ ಮಾಡಲು ಮತ್ತು ರೈತರ ಹಿತಕಾಯಲು ಹಿಂಜರಿಯುವದಿಲ್ಲ. ಇಡೀ ಜಿಲ್ಲೆಯಲ್ಲಿ ಅರಣ್ಯ ಸಾಗುವಳಿಯ ಒಟ್ಟು 97,075 ಅರ್ಜಿಗಳು ಬಂದಿದ್ದು ಕಾನೂನು ವ್ಯಾಪ್ತಿಯಲ್ಲಿ ಕೇವಲ 2,444 ಜನರಿಗೆ ಮಾತ್ರ ಹಕ್ಕುಪತ್ರ ದೊರಕಿದೆ. ಅದರಲ್ಲಿ 613 ಜನರಿಗೆ ಶಿಕಾರಿಪುರದಲ್ಲಿ ದೊರಕಿದೆ. ಈ ಸಮಸ್ಯೆಯ ಬಗ್ಗೆ ನಾನು ಸಂಸತ್‌ನಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಸಂಬಂಧಿಸಿದ ಇಲಾಖೆಗಳ ಮಂತ್ರಿಗಳ ಜತೆಗೆ ಮಾತನಾಡಿ ಮನವಿ ಸಲ್ಲಿಸಿದ್ದೇನೆ ಎಂದರು.
    ಯಡಿಯೂರಪ್ಪ ಅವರು ರೈತರಿಗಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ ಮತ್ತು ಈಗಲೂ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಚುನಾವಣೆ ಹತ್ತಿರ ಬಂದಿರುವುದರಿಂದ ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ಹಿಂದೆ ಯಡಿಯೂರಪ್ಪ ಬಗರ್‌ಹುಕುಂ ಸಮಸ್ಯೆಯ ಬಗ್ಗೆ ಶಿಕಾರಿಪುರದಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ಮಾಡಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ನಾಯಕರು ಅವರ ಪಕ್ಷದ ಶಾಸಕರು ಇದ್ದಾಗ ಎಷ್ಟು ಜನರಿಗೆ ಹಕ್ಕುಪತ್ರ ಕೊಡಿಸಿದ್ದಾರೆ ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts