More

    ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನತೆ

    ರಾಣೆಬೆನ್ನೂರ: ರಾಜ್ಯದಲ್ಲಿ ಕರೊನಾ ಸೋಂಕು ತಗಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಜನರು ಮಾತ್ರ ಕ್ಯಾರೇ ಅನ್ನುತ್ತಿಲ್ಲ.

    ತರಕಾರಿ ಹಾಗೂ ದಿನಸಿ ಮಾರಾಟಕ್ಕಾಗಿ ನಗರದ ವಿವಿಧೆಡೆ ಸ್ಥಳ ಗುರುತಿಸಿ ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ಆದರೆ, ಬೆಳಗ್ಗೆ ಮಾರುಕಟ್ಟೆಗೆ ಬರುವ ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಸಾಮಗ್ರಿಗಳನ್ನು ಖರೀದಿಸಲು ಮುಗಿಬೀಳುತ್ತಿರುವ ದೃಶ್ಯ ಕಂಡು ಬರುತ್ತಿದೆ. ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಇಂಥವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕಿದೆ.

    ಆಸ್ಪತ್ರೆಗೆ ಬಿಸಿಪಿ ಭೇಟಿ

    ಇಲ್ಲಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಸೋಮವಾರ ಭೇಟಿ ನೀಡಿ, ಸ್ವಚ್ಛತೆ ಹಾಗೂ ರೋಗಿಗಳ ಪರಿಸ್ಥಿತಿ ಅವಲೋಕಿಸಿದರು. ಕರೊನಾ ಸೋಂಕು ಹರಡದಂತೆ ಹಾಗೂ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ವೈದ್ಯರಿಗೆ ಸೂಚಿಸಿದರು. ಹೋಮ್ ಕ್ವಾರಂಟೈನ್​ನಲ್ಲಿವವರ ಮೇಲೆ ನಿಗಾವಹಿಸಬೇಕು. ಎಲ್ಲ ವೈದ್ಯರು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು ಕಾರ್ಯನಿರ್ವಹಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.

    ಶಾಸಕ ಅರುಣಕುಮಾರ ಪೂಜಾರ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂತೋಷಕುಮಾರ, ಡಿವೈಎಸ್​ಪಿ ಟಿ.ವಿ. ಸುರೇಶ ಮತ್ತಿತರರು ಉಪಸ್ಥಿತರಿದ್ದರು.

    ಬೆಳಗ್ಗೆ ಶಾಸಕ ಅರುಣಕುಮಾರ ಪೂಜಾರ ನಗರದ ದೊಡ್ಡಪೇಟೆ ತರಕಾರಿ ಮಾರುಕಟ್ಟೆ ಸೇರಿ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮಾಸ್ಕ್ ಧರಿಸದವನ್ನು ತರಾಟೆ ತೆಗೆದುಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts