More

    ಸಾಮಾಜಿಕ ನ್ಯಾಯಕ್ಕೆ ಮುನ್ನಡಿ ಬರೆದ ಕಾಂಗ್ರೆಸ್

    ಬೈಲಕುಪ್ಪೆ: ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವ ಯೋಜನೆಗಳನ್ನು ರೂಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಮುನ್ನುಡಿ ಬರೆದಿದೆ ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ತಿಳಿಸಿದರು.

    ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಜೆಡಿಎಸ್ ಪಕ್ಷಕ್ಕೆ ಸಿದ್ಧಾಂತವೇ ಇಲ್ಲ. ಅದೊಂದು ಕುಟುಂಬಕ್ಕಾಗಿ ಇರುವ ಪಕ್ಷ. ತಾಲೂಕಿನಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಬಿಟ್ಟರೆ ಯಾವುದಾದರೂ ಒಂದೇ ಒಂದು ಕಣ್ಣಿಗೆ ಕಾಣುವಂತಹ ಅಭಿವೃದ್ಧಿ ಇದ್ದರೆ ತೋರಿಸಲಿ ಎಂದು ಸವಾಲು ಹಾಕಿದರು.

    ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಚ್.ಡಿ.ಗಣೇಶ್ ಮಾತನಾಡಿ, ಕಾಂಗ್ರೆಸ್ ಈ ದೇಶಕ್ಕೆ ಸ್ವತಂತ್ರ ತಂದುಕೊಟ್ಟ ಪಕ್ಷ. ಇದಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಕಾಂಗ್ರೆಸ್ ನ್ಯಾಯ ಸಮ್ಮತವಾಗಿ ಬದುಕಲು ಅವಕಾಶ ಕಲ್ಪಿಸಿತ್ತು. ಆದರೆ ಬಿಜೆಪಿಯು ಶಾಸಕರನ್ನು ಖರೀದಿ ಮಾಡಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿ ಜನರ ಆ ಸೂತ್ರಗಳಿಗೆ ತಣ್ಣೀರೆರೆಚಿದ್ದಾರೆ. ಕಳೆದ ಚುನಾವಣೆಯಲ್ಲಿ ತಾಲೂಕಿನಲ್ಲಿ ವ್ಯತ್ಯಾಸ ಮತ್ತು ಗೊಂದಲಗಳಿಂದ ಕಾಂಗ್ರೆಸ್‌ಗೆ ಸೋಲಾಯಿತು. ಆದರೆ ಈ ಬಾರಿ ನಾವು ಬದಲಾವಣೆ ಮಾಡುತ್ತೇವೆ ಎಂದು ಜನರೇ ಚುನಾವಣೆಯನ್ನು ಆಹ್ವಾನ ಮಾಡುತ್ತಿದ್ದಾರೆ ಎಂದರು.

    ಕಾಂಗ್ರೆಸ್ ಸೇರ್ಪಡೆ: ಅವರ್ತಿ ವಿಶ್ವೇಶ್ವರಯ್ಯ, ಪ್ರಮೋದ್, ಅನ್ವರ್ ಸೇರಿದಂತೆ ನೂರಾರು ಜನರು ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾರ್ಯಕ್ರಮಕ್ಕೂ ಮುನ್ನ ಚಿಕ್ಕ ಹೊಸೂರಿನಿಂದ ಬೈಕ್ ರ‌್ಯಾಲಿ ಮುಖಾಂತರ ಕೊಪ್ಪಕ್ಕೆ ತೆರಳಿ ಕಾವೇರಮ್ಮನಿಗೆ ಪೂಜೆ ಸಲ್ಲಿಸಿ ಸಭೆಗೆ ಮಾಜಿ ಶಾಸಕ ಕೆ.ವೆಂಕಟೇಶ್ ಮತ್ತು ಗಣ್ಯರನ್ನು ಕಾರ್ಯಕರ್ತರು ಬರಮಾಡಿಕೊಂಡು. ಅಕಾಲಿಕವಾಗಿ ಅಗಲಿದ ನಾಯಕ ಆರ್.ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಗಣ್ಯರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

    ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡೂರಾವ್, ನಿತಿನ್ ವೆಂಕಟೇಶ್, ಬೈಲಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಡಿ.ಸ್ವಾಮಿ, ಮುಖಂಡರಾದ ಬಿ.ಜೆ.ಬಸವರಾಜು, ಕಾವೇರಿ ಶೇಖರ್, ಸಿ.ತಮ್ಮಣ್ಣಯ್ಯ, ಕೆ.ಕೆ.ರಾಮಸ್ವಾಮಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts