More

    ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿದ್ದವರಿಗೆ ಸಾಂತ್ವನ


    ಉಳ್ಳೇರಹಳ್ಳಿ ಗ್ರಾಮಕ್ಕೆ ಶಾಸಕ ಬಿ.ಹರ್ಷವರ್ಧನ್ ಭೇಟಿ


    ನಂಜನಗೂಡು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಉಳ್ಳೇರಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿದ್ದ ಕುಟುಂಬವನ್ನು ಶುಕ್ರವಾರ ವಿಧಾನಮಂಡಲದ ಅನುಸೂಚಿತ ಜಾತಿ ಹಾಗೂ ಪಂಗಡಗಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಭೇಟಿ ಮಾಡಿ ಸಾಂತ್ವನ ಹೇಳಿದರು.


    ವಸ್ತುಸ್ಥಿತಿ ಮಾಹಿತಿ ಪಡೆದುಕೊಂಡ ಶಾಸಕ ಹರ್ಷವರ್ಧನ್, ಸರ್ಕಾರದಿಂದ ಎಲ್ಲ ರೀತಿಯ ನೆರವು ಕೊಡಿಸುವುದಾಗಿ ಕುಟುಂಬದವರಿಗೆ ಅಭಯ ನೀಡಿದರು.


    ದೇವರ ಕೋಲು ಮುಟ್ಟಿದ ಎಂಬ ಕಾರಣಕ್ಕೆ ದಲಿತ ಬಾಲಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ 60 ಸಾವಿರ ರೂ. ದಂಡ ವಿಧಿಸಿರುವುದು ಶೋಚನೀಯ ಸಂಗತಿ. ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಬಹಿಷ್ಕಾರ ಹಾಕಿದವರ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವುದು ಸ್ವಾಗತಾರ್ಹ ಎಂದು ಹರ್ಷವರ್ಧನ್ ತಿಳಿಸಿದರು.


    ಘಟನೆಯಿಂದಾಗಿ ಕುಟುಂಬ ಸದಸ್ಯರು ಸಂಪೂರ್ಣ ಜರ್ಜರಿತರಾಗಿದ್ದರು. ಈಗಾಗಲೇ ಎಸ್ಸಿ, ಎಸ್ಟಿ ಕಲ್ಯಾಣ ಸಮಿತಿ ಸಭೆ ನಡೆಸಿ ಅವರಿಗೆ ಸಂಪೂರ್ಣ ನೆರವು ನೀಡುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಸ್ತುಸ್ಥಿತಿ ಅರಿಯುವ ನಿಟ್ಟಿನಲ್ಲಿ ನಾನೇ ಖುದ್ದು ಕುಟುಂಬವನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿ ಅವರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಕೊಡಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಶಾಸಕ ಹರ್ಷವರ್ಧನ್ ಕುಟುಂಬಕ್ಕೆ ವೈಯಕ್ತಿಕವಾಗಿ ನೆರವು ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts