More

    ಸಾಮಾಜಿಕ ಲೆಕ್ಕ ಪರಿಶೋಧನೆಗೆ ಹೆಚ್ಚಿನ ನಿಗಾ ವಹಿಸಿ

    ಗದಗ: ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸಲು ಸಾಮಾಜಿಕ ಲೆಕ್ಕ ಪರಿಶೋಧನೆಗೆ ಹೆಚ್ಚಿನ ನಿಗಾ ವಹಿಸಿ ವರದಿ ಸಲ್ಲಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

    ನಗರದ ಜಿ.ಪಂ. ವಿಡಿಯೋ ಕಾನ್ಪರನ್ಸ್ ಹಾಲ್​ನಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

    ಶಿರಹಟ್ಟಿ ತಾಲೂಕು ಹೆಬ್ಬಾಳ ಹಾಗೂ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮಗಳಲ್ಲಿ ಬಾಕಿ ವಸೂಲಾತಿ ಇರುವ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

    ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಜನಸಾಮಾನ್ಯರ ಬದುಕು ಸುದಾರಿಸಲು ಸಾಮಾಜಿಕ ಭದ್ರತೆ ಹಾಗೂ ವಿವಿಧ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ಸಹಾಯಧನದ ವಿತರಣೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ ಮಾತನಾಡಿ, ಶಿರಹಟ್ಟಿ ತಾಲೂಕು ಹೆಬ್ಬಾಳ ಗ್ರಾಮ ಪಂಚಾಯಿತಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಅಡಿ 1 ಕೋಟಿ ರೂ. ವಸೂಲಾತಿ ಆಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ. ಮಾತನಾಡಿ, ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆಯಡಿ ಬಾಕಿ ಇರುವ 1 ಕೋಟಿ 85 ಲಕ್ಷ ರೂ. ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಹೇಳಿದರು.

    ಶಾಸಕ ಕಳಕಪ್ಪ ಬಂಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ, ಗದಗ-ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts