More

    ಸಾಮೂಹಿಕ ಪ್ರಾರ್ಥನೆಗೆ ಇಲ್ಲ ಅವಕಾಶ

    ಶಿವಮೊಗ್ಗ: ಲಾಕ್​ಡೌನ್ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಡಿಸಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಸ್ಲಿಂ ಸಮುದಾಯದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ, ಲಾಕ್​ಡೌನ್ ಇರುವುದರಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದರು.

    ಈದ್ ನಿಮತ್ತ ಪರಿಸ್ಪರ ಶುಭಾಶಯಕ್ಕಾಗಿ ಕೈ ಕುಲುಕುವುದು, ತಬ್ಬಿಕೊಳ್ಳುವುದನ್ನು ತಪ್ಪಿಸಬೇಕು. ಕಂಟೇನ್ಮೆಂಟ್ ಪ್ರದೇಶದಲ್ಲಿ ಈ ರೀತಿ ಶುಭಾಶಯ ಯಾವುದೇ ಕಾರಣಕ್ಕೂ ಕೋರಬಾರದು. ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ. ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.

    ಹಬ್ಬದ ಅಂಗವಾಗಿ ಬಲವಂತವಾಗಿ ಯಾವುದೇ ಮನೆ ಹಾಗೂ ಅಂಗಡಿ ಎದುರು ಫ್ಲೆಕ್ಸ್​ಗಳನ್ನು ಹಾಕುವುದು ಅಪರಾಧ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮೆರವಣಿಗೆ ಸಂದರ್ಭದಲ್ಲಿ ಬೈಕ್​ಗಳನ್ನು ತರದೇ ಎಲ್ಲರೂ ಕಾಲ್ನಡಿಗೆಯಲ್ಲೇ ಬರಬೇಕೆಂದರು.

    ಮನೆ ಮಹಡಿ ಮೇಲೆ ಅವಕಾಶ ಕಲ್ಪಿಸಿ: ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಲ ಮುಖಂಡರು ದರ್ಗಾದಲ್ಲಿ ಅಥವಾ ಮನೆ ಮಹಡಿ ಮೇಲೆ ನಿರ್ದಿಷ್ಟ ಸಂಖ್ಯೆಯಲ್ಲಿ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿದರು. ಮತ್ತೆ ಕೆಲವರು ನಗರದಲ್ಲಿ ಕನಿಷ್ಠ 7ರಿಂದ 8 ದರ್ಗಾಗಳಿವೆ. ಒಂದೊಂದು ದರ್ಗಾದಲ್ಲಿ ಕನಿಷ್ಠ 50 ಜನ ಸೇರಿ ನಮಾಜು ಮಾಡಲು ಅವಕಾಶ ಕೋರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಲಾಕ್​ಡೌನ್ ಇರುವ ಕಾರಣ ಸಾಮೂಹಿಕ ನಮಾಜು ಮಾಡಲು ಅವಕಾಶವಿಲ್ಲ. ಹಾಗಾಗಿ ಪ್ರತಿಯೊಬ್ಬರೂ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಎಎಸ್ಪಿ ಜಯಪ್ರಕಾಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts