More

    ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವುದೇ ಗುರಿ

    ವಿಜಯವಾಣಿ ಸುದ್ದಿಜಾಲ ಹೊನ್ನಾವರ: ಹಾನಿಯಲ್ಲಿರುವ ರಸ್ತೆ ಸಾರಿಗೆ ಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವಾಗಿ ಮಾಡಿ ಜನರಿಗೆ ಒಳ್ಳೆಯ ಸೇವೆ ನೀಡುವಂತೆ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

    ಪಟ್ಟಣದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ವಣಗೊಳ್ಳಲಿರುವ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ದುರ್ಗಾಕೇರಿಯ ಶ್ರೀ ದಂಡಿನ ದುರ್ಗಾದೇವಿ ಸಭಾಭವನದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ರಾಜ್ಯದಲ್ಲಿ 4 ಸಾವಿರ ಬಸ್ ಬೇಡಿಕೆ ಇದೆ. ಇಲಕ್ಟ್ರಿಕಲ್ ಅಳವಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೇ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಬಸ್ ನಿಲ್ದಾಣದ ಕಟ್ಟಡವು ಸುಸಜ್ಜಿತವಾಗಿ ನಿರ್ವಣಗೊಳ್ಳಲಿದೆ. ಕಟ್ಟಡ ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಬಸ್​ಗೆ ವಿಧಿಸುವ ಶುಲ್ಕವನ್ನು ಕಡಿಮೆಗೊಳಿಸಲು ಕೇಂದ್ರ ಭೂಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ನಮ್ಮ ಜಿಲ್ಲೆಯು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಸಿಆರ್​ರೆಡ್, ಅತಿಕ್ರಮಣದಾರರ ಸಮಸ್ಯೆ, ಅಭಯಾರಣ್ಯ, ಇ-ಸ್ವತ್ತು, ಇತ್ತೀಚೆಗೆ ಟೋಲ್ ಪ್ಲಾಜಾ ಸಮಸ್ಯೆ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಸಹಾಯ, ಸಹಕಾರ ನೀಡಬೇಕಿದೆ. ಅಭಿವೃದ್ಧಿ ವಿಚಾರದಲ್ಲಿ ಇನ್ನು ಹೊಸತನದ ಕಲ್ಪನೆಗಳು ರೂಪುಗೊಳ್ಳಬೇಕಿದೆ ಎಂದರು.

    ವಾಕರಸಾ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ, ಶಾಸಕಿ ರೂಪಾಲಿ ನಾಯ್ಕ, ಜಿ.ಪಂ. ಸದಸ್ಯ ಶಿವಾನಂದ ಹೆಗಡೆ ಕಡತೋಕ, ವಾಕರಸಾ ಸಂಸ್ಥೆಯ ಮುಖ್ಯ ಕಾಮಗಾರಿ ಇಂಜಿನಿಯರ್ ಟಿ.ಕೆ. ಪಾಲನೇತ್ರ ನಾಯಕ, ರಾಜೇಶ ಭಂಡಾರಿ, ಸದಾನಂದ ಭಟ್, ಶಿವರಾಜ ಮೇಸ್ತ, ವಿಜಯ ಕಾಮತ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts