More

    ಸಾರಿಗೆ ಸೌಕರ್ಯ, ಸುರಕ್ಷತಾ ಕ್ರಮಕ್ಕೆ ಆದ್ಯತೆ ನೀಡಿ

    ಧಾರವಾಡ: ಜೂ. 25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ಒಬ್ಬ ವಿದ್ಯಾರ್ಥಿಯೂ ವಂಚಿತರಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ವಾಸಸ್ಥಳ ಮಾಹಿತಿ ಪಡೆದು ಸಾರಿಗೆ ವಾಹನಗಳ ಮಾರ್ಗ ನಕ್ಷೆ ಸಿದ್ಧಪಡಿಸಿ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

    ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ಕರೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳು ಘೊಷಿತ ಕಂಟೇನ್ಮೆಂಟ್ ವಲಯದಲ್ಲಿ ಇಲ್ಲ. ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್ ಕೇಂದ್ರವಾಗಿ ಬಳಕೆಯಾಗಿಲ್ಲ. ಪರೀಕ್ಷೆ ಆರಂಭವಾದ ನಂತರ ಯಾವುದಾದರೂ ಪರೀಕ್ಷಾ ಕೇಂದ್ರಗಳು ಕಂಟೇನ್ಮೆಂಟ್ ವ್ಯಾಪ್ತಿಗೆ ಒಳಪಡುವ ಸಾಧ್ಯತೆಗಳಿದ್ದರೆ ತಕ್ಷಣ ಪರ್ಯಾಯ ಕೇಂದ್ರ ಗುರುತಿಸಿ ಪರೀಕ್ಷೆಯನ್ನು ನಿಗದಿತ ದಿನಾಂಕದಂದು ನಡೆಸಬೇಕು. ಶಿಕ್ಷಣ ಇಲಾಖೆಯು ಸೂಚಿಸುವ ಮಾರ್ಗನಕ್ಷೆಗೆ ಅನುಗುಣವಾಗಿ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಶಾಲಾ ವಾಹನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಸಾರಿಗೆ ಸೌಕರ್ಯ ಕಲ್ಪಿಸಲಾಗುವುದು ಎಂದರು.

    ಜಿಪಂ ಸಿಇಒ ಡಾ. ಬಿ.ಸಿ. ಸತೀಶ ಮಾತನಾಡಿ, ಪ್ರತಿ ವಿದ್ಯಾರ್ಥಿಯನ್ನು ಆಯಾ ಶಾಲೆಯ ಮುಖ್ಯಾಧ್ಯಾಪಕರ ಮೂಲಕ ಸಂರ್ಪಸಿ ಸಾರಿಗೆ ಮಾಹಿತಿ ಖಚಿತಪಡಿಸಿಕೊಳ್ಳಬೇಕು. ಎಲ್ಲ ಕೇಂದ್ರಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಪೂರೈಸಲಾಗುವುದು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂಸೇವಕರ ನೆರವಿನೊಂದಿಗೆ ಪರೀಕ್ಷೆಗಳನ್ನು ನಡೆಸಬೇಕು ಎಂದರು.

    ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಶಾರದಾ ಕಿರೇಸೂರ ಮಾತನಾಡಿ, ಜೂ. 18ರಂದು ಜಿಲ್ಲೆಯ 38 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ದ್ವಿತೀಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. 22,000 ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ವಾ.ಕ.ರ.ಸಾ.ಸಂ. ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಎಚ್. ರಾಮನಗೌಡರ, ವಿವೇಕಾನಂದ ವಿಶ್ವಜ್ಞ, ಬಸವಲಿಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

    ಸಹಾಯವಾಣಿ

    ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾರಿಗೆ ಸೌಲಭ್ಯದ ಕೋರಿಕೆಯನ್ನು ಮುಂಚಿತವಾಗಿ ಜಿಲ್ಲಾಡಳಿತದ ಸಹಾಯವಾಣಿ 1077 ಸಂಖ್ಯೆ ಸಂರ್ಪಸಿ ಹೆಸರು, ವಿಳಾಸ, ಪರೀಕ್ಷಾ ಕೇಂದ್ರ ತಿಳಿಸಿ ವಾಹನದ ಸಮಯ ಖಚಿತಪಡಿಸಿಕೊಳ್ಳಬೇಕು.

    ಜಿಲ್ಲೆಯಲ್ಲಿ 27,841 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. 90 ಪರೀಕ್ಷಾ ಕೇಂದ್ರಗಳು ಹಾಗೂ 17 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.
    | ಮೋಹನ ಹಂಚಾಟೆ ಡಿಡಿಪಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts