More

    ಸಾರ್ವಜನಿಕರ ಸಮಸ್ಯೆಗೆ ಎಸ್ಪಿ ತ್ವರಿತ ಸ್ವಂದನೆ

    ಬೆಳಗಾವಿ: ನಾಪತ್ತೆಯಾದವರ ಪತ್ತೆ ಹಚ್ಚುವುದು, ಜಾತ್ರೆಗಳಲ್ಲಿನ ಕಳ್ಳತನ, ದರೋಡೆ ಹಾಗೂ ಅಕ್ರಮ ಮದ್ಯ ಮಾರಾಟ ತಡೆಯುಂತೆ ಒತ್ತಾಯಿಸಿ ಮಾಡಿದ ಸಾರ್ವಜನಿಕರ ದೂರವಾಣಿ ಕರೆಗಳಿಗೆ ಪ್ರತಿಕ್ರಿಯಿಸಿದ ಎಸ್ಪಿ ಡಾ.ಸಂಜೀವ ಪಾಟೀಲ ಅವರು, ಎಲ್ಲ ಅಕ್ರಮ ಚಟುವಟಿಕಗಳನ್ನೂ ತೆಡೆಯುವುದಾಗಿ ಅಭಯ ನೀಡಿದರು.

    ನಗರದ ಎಸ್ಪಿ ಕಚೇರಿದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ 56 ಕರೆಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ತುರ್ತಾಗಿ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.
    ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ವ್ಯಕ್ತಿಯೋರ್ವ ಹಾಲಿನಲ್ಲಿ ನೀರು ಬೆರೆಸಿ ಮಾರಾಟ ಮಾಡುತ್ತಿದ್ದಾನೆ ಎಂದು ಬಂದ ದೂರಿಗೆ ಪ್ರತಿಕ್ರಿಯಿಸಿದ ಎಸ್ಪಿ, ಇದನ್ನೆಲ್ಲ ಬಂದ್ ಮಾಡಿಸುವುದಾಗಿ ತಿಳಿಸಿದರು.

    ನಾಗನೂರು ಗ್ರಾಮದಲ್ಲಿ ಕಳೆದ 22ರಂದು ಕೊಲೆಯಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅದೇ ಸ್ಥಳದಲ್ಲಿ ಸುಮಾರು ಐದು ಕೊಲೆಗಳು ನಡೆದಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಬಂದಿರುವ ಕರೆಗೆ ಪ್ರತಿಕ್ರಿಸಿದ ಎಸ್ಪಿ, ಯಾರು ಕೊಲೆಯಾಗಿದ್ದಾರೆ ಎನ್ನುವ ಮಾಹಿತಿ ನಿಖರವಾಗಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಸೂಕ್ತ ಮಾಹಿತಿ ನೀಡಿದರೆ ಕೊಲೆ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.

    ರಾಯಬಾಗ ತಾಲೂಕಿನ ಚಿಂಚಲಿ ಜಾತ್ರೆಯಲ್ಲಿ ಕಳ್ಳತನ, ದರೋಡೆ ನಡೆಯುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆ ನೀಡಬೇಕೆಂದು ಮನವಿ ಮಾಡಿಕೊಳ್ಳಲಾಯಿತು. ಅಥಣಿ ತಾಲೂಕಿನ ಕೆಎಸ್‌ಆರ್‌ಟಿಸಿ ವಾಹನ ಚಾಲಕರಾಗಿರುವ ನನ್ನ ಪತಿ ನಾಪತ್ತೆಯಾಗಿದ್ದಾನೆಂಬ ಕರೆಗೆ ಉತ್ತರಿಸಿದ ಎಸ್ಪಿ ಪಾಟೀಲ ಅವರು, ಸಂಜೆಯೊಳಗೆ ಪತ್ತೆ ಮಾಡಲಾಗುವುದು ಎಂದು ಹೇಳಿದರು. ಬೈಲಹೊಂಗಲ ತಾಲೂಕಿನ ಮಹಿಳೆ, ವ್ಯಕ್ತಿ ಕಾಣೆಯಾಗಿರುವ ಕುರಿತು ಬೈಲಹೊಂಗಲ ಹಾಗೂ ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಾ.ಸಂಜೀವ ಪಾಟೀಲ, ಸಂಬಂಧಿಸಿದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ ಎಫ್‌ಐಆರ್ ದಾಖಲಿಸಿಕೊಳ್ಳಲು ಸೂಚಿಸುತ್ತೇವೆ ಎಂದರು. ಫೋನ್ ಇನ್ ಕಾರ್ಯಕ್ರಮದಲ್ಲಿ ಪೊಲೀಸ್ ಇನ್ಸಪೆಕ್ಟರ್‌ಗಳಾದ ಬಿ.ಆರ್.ಗಡ್ಡೆಕರ್, ಮಹಾದೇವ ಎಸ್.ಎಂ., ಬಾಳಪ್ಪ ತಳವಾರ, ವಿಠ್ಠಲ ಮಾದರ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts