More

    ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಿ


    ಯಾದಗಿರಿ: ಗ್ರಾಮೀಣ ಪ್ರದೇಶದ ಜನರಿಗೆ ಸರಕಾರ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಸಂಬಂಧಿಸಿದ ಅಧಿಕಾರಿಗಳು ಬಗೆಹರಿಸುವಂತೆ ಜಿಪಂ ಸಿಇಒ ಗರೀಮಾ ಪನ್ವಾರ ಸೂಚನೆ ನೀಡಿದರು.


    ತಾಲೂಕಿನ ಮುದ್ನಾಳ್ ಗ್ರಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿ, ಸರಕಾರಿ ಇಲಾಖೆಗಳಿಂದ ಅನುಷ್ಠಾನಗೊಳಿಸುವ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳಲ್ಲಿ ಗ್ರಾಮೀಣ ಜನರಿಗೆ ಸಿಗುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು. ಅಲ್ಲದೇ, ಯೋಜನೆಗಳ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದರು.

    ಗ್ರಾಮದ ಜನರಿಂದ 15 ಅರ್ಜಿ ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ನೀಡಲಾಯಿತು. ಎರಡು ಅರ್ಜಿಗಳನ್ನು ಲೋಕೋಪಯೋಗಿ ಇಲಾಖೆಗೆ ವಗರ್ಾಯಿಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಲಾಯಿತು. ಬಳಿಕ ಗ್ರಾಮದ ಅಂಗನವಾಡಿ, ಸರಕಾರಿ ಪ್ರೌಢ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಸಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ತಾಪಂ ಇಒ ಬಸವರಾಜ ಶರಬೈ, ಪಂಚಾಯತಿ ಅಧ್ಯಕ್ಷೆ ಮೇನಕಾ ವಿನೋದ, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಪಿಡಿಒ ನೀಲಕಂಠ ಶಹಾಪುರಕರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts