More

    ಸಾರ್ವಜನಿಕರ ಸಮಸ್ಯೆಗೆ ಸದಾ ಸ್ಪಂದಿಸುವೆ: ಸಚಿವೆ ಶಶಿಕಲಾ ಜೊಲ್ಲೆ ಭರವಸೆ

    ವಿಜಯಪುರ: ಮಹಾಮಾರಿ ಕರೊನಾ, ನೆರೆಯಿಂದಾಗಿ ಅಪಾರ ಹಾನಿಯಾಗಿದ್ದು ಸರ್ಕಾರ ನೈಸರ್ಗಿಕ ವಿಪತ್ತನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಜಿಲ್ಲೆ ಉಸ್ತುವಾರಿ ಸಚಿವೆ ಶಶಿಕಲಾ‌ ಜೊಲ್ಲೆ ಹೆಮ್ಮೆ ವ್ಯಕ್ತಪಡಿಸಿದರು.

    ಸಿಂದಗಿಯ ಶ್ರೀ ಸಾತವೀರೇಶ್ವರ ಅಭಾಭವನದಲ್ಲಿ ಬುಧವಾರ ಸಾರ್ವಜನಿಕ ಕುಂದುಕೊರತೆಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿದ್ದು ಅವುಗಳನ್ನು ಸವಾಲಾಗಿ ಸ್ವೀಕರಿಸಿದ್ದು ಮಾತ್ರವಲ್ಲದೇ ಸಮರ್ಥವಾಗಿ‌ ನಿಭಾಯಿಸಿದ ಹಿರಿಮೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕೆಂದರು.
    ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ. ಅನೇಕ ಜನಪರ ಕಾರ್ಯಕ್ರಮ ಜಾರಿಗೊಳಿಸಿದ್ದು ಅವುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಭೆ ಆಯೋಸುತ್ತಿರುವುದಾಗಿ ತಿಳಿಸಿದರು.
    ಇನ್ಮುಂದೆ ಯಾವುದೇ ಸಮಸ್ಯೆ ಇರಲಿ ಜನರು ನೇರವಾಗಿ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಬಗೆ ಹರಿಸಿಕೊಳ್ಳಬೇಕೆಂದರು.

    ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾತನಾಡಿ, ಪ್ರಾಕೃತಿಕ ವಿಕೋಪದಂಥ ಸಂದರ್ಭದಲ್ಲಿ ಸರ್ಕಾರ ಪರಿಹಾರ ನೀಡಿದೆ. ಮನೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಪರಿಹಾರ ವಿತರಿಸಲಾಗಿದೆ‌. ಸುಮಾರು 4000 ಮನೆಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಇನ್ನೂ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕುಂದುಕೊರತೆ ಸಭೆ ಆಯೋಜಿಸಲಾಗಿದೆ ಎಂದರು.
    ಆರೋಗ್ಯ ಇಲಾಖೆ, ಹಿರಿಯ ನಾಗರಿಕರ ಸಮಸ್ಯೆ ಬಗೆ ಹರಿಸಲು ಆದ್ಯತೆ ನೀಡಲಾಗುವುದು. ಹಿರಿಯ ನಾಗರಿಕರನ್ನು ಮಕ್ಕಳು ಚೆನ್ನಾಗಿ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಉಪ ವಿಭಾಗಾಧಿಕಾರಿಗಳು ಕ್ರಮ ಕೈಗೊಳ್ಳುವ ಅಧಿಕಾರ ಇದೆ ಎಂದರು.
    ಇನ್ನು ತೋಟಗಾರಿಕೆ ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
    ಮುಖ್ಯವಾಗಿ ಬೀದಿ ದೀಪ, ರಸ್ತೆ ಹಾಗೂ ಒಳಚರಂಡಿ, ಕುಡಿಯುವ‌ ನೀರಿನ ಸಮಸ್ಯೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

    ಲಿಂಬೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಅಲ್ಲಾಪುರ,
    ಜಿಪಂ ಸಿಇಒ ಗೋವಿಂದ ರೆಡ್ಡಿ, ಉಪ ವಿಭಾಗಾಧಿಕಾರಿ ರಾಹುಲ್ ಶಿಂಧೆ, ಎಎಸ್ ಪಿ ಡಾ.ರಾಮ ಅರಸಿದ್ದಿ, ಇಂಡಿ ಡಿವೈ ಎಸ್ ಪಿ ಶ್ರೀಧರ ದಡ್ಡಿ, ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ತಾಪಂ ಅಧ್ಯಕ್ಷೆ ಮಹಾನಂದ ಸಾಲಕ್ಕಿ, ಜಿಪಂ ಸದಸ್ಯ ಮಹಾಂತಗೌಡ ಪಾಟೀಲ ಮತ್ತಿತರರಿದ್ದರು.

    ಹಂದಿಗನೂರು ಸಿದ್ರಾಮಪ್ಪ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಆಗ್ರಹಿಸಿ ಮನವಿ ಸಲ್ಲಿಸುವುದು ಸೇರಿದಂತೆ ಅನೇಕ ಮನವಿಗಳು ಸಲ್ಲಿಕೆಯಾದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts