More

    ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ

    ಶಹಾಪುರ : ಗ್ರಾಮೀಣ ಪ್ರದೇಶದಿಂದ ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗೆ ಕೂಡಲೇ ಸ್ಪಂದಿಸಿ, ಇಲಾಖಾವಾರು ಹಂಚಿಕೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

    ಇಲ್ಲಿನ ತಾಪಂ ಕಚೇರಿಯಲ್ಲಿ ಗುರುವಾರ ಕರೆದಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪುವಂತೆ ಜಾಗೃತಿ ವಹಿಸಿ. ಹಾಗೊಂದು ವೇಳೆ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಸಂಬAಧಿಸಿದವರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಶಕ್ತಿ ಯೋಜನೆ ಜಾರಿಯಿಂದ ತಾಲೂಕಿನಲ್ಲಿ ಶೇ.೪೦ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಪ್ರತಿದಿನ ಶಹಾಪುರ ಘಕಟದ ಬಸ್‌ಗಳಲ್ಲಿ ೭ ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂದರು.

    ತಾಲೂಕಿನಾದ್ಯAತ ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲು ತಿಳಿಸಿದ ಸಚಿವರು, ಕೆಲ ಗ್ರಾಮಗಲ್ಲಿ ಕೆಟ್ಟುನಿಂತ ಶುದ್ಧ ಕುಡಿವ ನೀರಿನ ಘಟಕವನ್ನು ಶೀಘ್ರ ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಆ.೨೭ರಂದು ಎಲ್ಲ ಪಿಡಿಒಗಳ ಸಭೆ ಕರೆದು ಕುಡಿವ ನೀರಿನ ಸಮಸ್ಯೆಗೆ ಪರಿಹಾರ ನೀಡಲು ತಾಪಂ ಇಒಗೆ ಸೂಚಿಸಿದರು.

    ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ಲೋಕೋಪಯೋಗಿ ಇಲಾಖೆ, ಭೂ ಸೇನಾ ನಿಗಮ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಸಮಸ್ಯೆಗಳಿದ್ದರೆ ಸಂಬAಧಿಸಿದವರ ಗಮನಕ್ಕೆ ತಂದು ಶೀಘ್ರ ಪರಿಹರಿಸಬೇಕು. ಅಂಗನವಾಡಿ ಕೇಂದ್ರ ಮತ್ತು ಶಾಲಾ-ಕಾಲೇಜುಗಳ ಕೋಣೆಗಳನ್ನು ದುರಸ್ತಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
    ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ತಹಸೀಲ್ದಾರ್ ಉಮಾಕಾಂತ ಹಳ್ಳಿ, ಇಒ ಸೋಮಶೇಖರ ಬಿರಾದಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts