More

    ಸಾರ್ವಜನಿಕ ಗಣೇಶೋತ್ಸವದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ

    ಚಿಕ್ಕಮಗಳೂರು: ನಗರದ ಶ್ರೀ ಬೋಳರಾಮೆಶ್ವರ ದೇವಾಲಯದ ಆವರಣದಲ್ಲಿ 23 ದಿನ ಪ್ರತಿಷ್ಠಾಪಿಸುವ ಆಜಾದ್ ಪಾರ್ಕ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗಣಪತಿ ಸೇವಾ ಸಮಿತಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು.

    ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಗಣಪತಿ ಮಹಾಮಂಟಪ ನಿರ್ವಣಕ್ಕೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗಣೇಶೋತ್ಸವವನ್ನು ಹತ್ತು ವರ್ಷಗಳಿಂದ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಕರೊನಾ ಸಂದರ್ಭ ಮೂರು ವರ್ಷ ಸರಳವಾಗಿ ಆಚರಿಸಲಾಗಿತ್ತು. ವಿಘ್ನೇಶ್ವರನ ಕೃಪೆಯಿಂದ ಕರೊನಾ ಸಂಕಷ್ಟದಿಂದ ಹೊರಬಂದಿರುವ ಕಾರಣ ಈ ಬಾರಿ 23 ದಿನಗಳ ಕಾಲ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ, ಹೋಮ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲು ಸಮಿತಿ ನಿರ್ಧರಿಸಿದೆ ಎಂದರು.

    ಆ.31ರಂದು ಬಸವನಹಳ್ಳಿ ಶ್ರೀ ರಂಗನಾಥಸ್ವಾಮಿ ದೇವಾಲಯದಿಂದ ಗಣಪತಿ ಮೂರ್ತಿಯನ್ನು ನಾದಸ್ವರ ವಾದ್ಯದೊಂದಿಗೆ ಭಕ್ತರ ಸಮ್ಮುಖದಲ್ಲಿ ಎಂ.ಜಿ.ರಸ್ತೆ ಮೂಲಕ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಲಾಗುವುದು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸುಗಮ ಸಂಗೀತ, ನೃತ್ಯ, ಭರತನಾಟ್ಯ, ಆರ್ಕೆಸ್ಟ್ರಾ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ನಿತ್ಯ ವಿಶೇಷ ಪೂಜೆ, ಪ್ರಸಾದ ವಿನಿಯೋಗಿಸಲಾಗುವುದು ಎಂದು ಹೇಳಿದರು.

    ಸೆ.22ರಂದು ಬೆಳಗ್ಗೆ 10 ಗಂಟೆಗೆ ಗಣಪತಿ ವಿಗ್ರಹವನ್ನು ಪುಷ್ಪಾಲಂಕೃತ ವಾಹನದಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ನಗರದಲ್ಲಿ ರಾಜಬೀದಿ ಉತ್ಸವ ಮಾಡಲಾಗುವುದು. ಬಸವನಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ವಿಸರ್ಜಿಸಲು ಸಮಿತಿ ನಿಶ್ಚಯಿಸಿದೆ. ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ, ಎಸ್ಪಿ, ನಗರಸಭೆ ಅಧಿಕಾರಿಗಳೆಲ್ಲ ರ್ಚಚಿಸಿ ಮಾರ್ಗಸೂಚಿ ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts