More

    ಸಾರ್ವಜನಿಕ ಸಭೆಗಳಿಗೆ ಅನುಮತಿ ಕಡ್ಡಾಯ

    ಯಾದಗಿರಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಪಕ್ಷದ ಮುಖಂಡರು, ಸಾರ್ವಜನಿಕರು ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭ, ಮೆರವಣಿಗೆ ಇತರೆ ಕಾರ್ಯಕ್ರಮಗಳಿಗೆ ಅನುಮತಿ ಪಡೆಕೊಳ್ಳಬೇಕು ಹಾಗೂ ಚುನಾವಣೆಯಲ್ಲಿ ಕಾರ್ಯನಿರತ ಅಧಿಕಾರಿ ಮತ್ತು ನೌಕಕರು ಯಾವುದೇ ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.

    ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿದ ಕ್ಷಿಪ್ರ ಸಂಚಾರಿ ದಳ, ವಿಡಿಯೋ ಕಣ್ಗಾವಲು ತಂಡ, ಸೆಕ್ಟರ್ ಅಧಿಕಾರಿಗಳು ಮತ್ತು ಅಧಿಕಾರಿಗಳ ವಿವಿಧ ತಂಡಗಳ ತರಬೇತಿ ಉದ್ದೇಶಿಸಿ ಮಾತನಾಡಿದ ಅವರು, ಈಶಾನ್ಯ ಕನರ್ಾಟಕ ಶಿಕ್ಷಕರ ಮತಕ್ಷೇತ್ರಕ್ಕೆ ನೇಮಕ ಮಾಡಿದ ಅಧಿಕಾರಿಗಳ ತಂಡಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಿ ಹಾಗೂ ಮತಗಟ್ಟೆಗಳಲ್ಲಿ ಮತದಾನ ದಿನ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಬೇಕು ಎಂದರು.

    ಜಿಲ್ಲೆಯಲ್ಲಿ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಒಟ್ಟು 7 ಮತಗಟ್ಟೆಗಳಿದ್ದು, ಶಿಕ್ಷಕ ಮತದಾರರು ಒಟ್ಟು ಇಲ್ಲಿಯವರೆಗೆ 1970 ಶಿಕ್ಷಕ ಮತದಾರರು ಇದ್ದು, ಇದರಲ್ಲಿ ಯಾದಗಿರಿ ತಾಲೂಕಿನಲ್ಲಿ ಒಟ್ಟು 431 ಮತದಾರರು, ಗುರುಮಠಕಲ್ನಲ್ಲಿ 165, ಶಹಾಪುರದಲ್ಲಿ ಒಟ್ಟು 710, ಸುರಪುರದಲ್ಲಿ 404, ಹುಣಸಗಿಯಲ್ಲಿ 79, ಕೆಂಭಾವಿನಲ್ಲಿ 111 ಹಾಗೂ ಕೋಡೆಕಲ್ನಲ್ಲಿ 70 ಇದ್ದು, ಎಲ್ಲ ತಾಲೂಕು, ಹೋಬಳಿಗಳಲ್ಲಿ ಒಟ್ಟಾರೆ ಇಲ್ಲಿಯವರೆಗೆ 1970 ಪುರುಷ ಮತ್ತು ಮಹಿಳೆ ಶಿಕ್ಷಕ ಮತದಾರರು ಇದ್ದಾರೆ ಎಂದು ತಿಳಿಸಿದರು.

    ಚುನಾವಣೆಗೆ ಸಂಬಂಧಿಸಿದಂತೆ ದೂರುಗಳನ್ನು ಮತ್ತು ಕುಂದುಕೊರತೆಗಳನ್ನು ಸಾರ್ವಜನಿಕರು ಸಲ್ಲಿಸಲು ಸಹಾಯಕ ಚುನಾವಣಾಧಿಕಾರಿ ಕಚೇರಿ ಯಾದಗಿರಿಯಲ್ಲಿ 24/7 ಸಹಾಯವಾಣಿ ಸ್ಥಾಪಿಸಲಾಗಿದ್ದು, ದಿನದ 24 ಗಂಟೆ ಕಾರ್ಯನಿರ್ವಹಣೆಯಲ್ಲಿರುತ್ತದೆ. ಚುನಾವಣಾ ಶಾಖೆ ಕೊಠಡಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ದೂ.08473-253705 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳನ್ನು ಹಾಗೂ ಕುಂದುಕೊರತೆಗಳನ್ನು ದಾಖಲಿಸಿಕೊಳ್ಳಲು ಡಾ. ಪುಣ್ಯಕೋಟೆ ಅವರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದ್ದು ಅವರ ಮೊ.8310632137 ಗೆ ಸಂಪಕರ್ಿಸಬಹುದು ಎಂದು ಹೇಳಿದರು.

    ಜಿಪಂ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ, ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುಫೀಯಾ ಸುಲ್ತಾನ, ಜಗನ್ನಾಥ ರೆಡ್ಡಿ, ಸಂಗಮೇಶ ಜಿಡಗೆ, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಶರಣಭೂಪಾಲ ರೆಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts