ಸಾಲದ ಹೊರೆ ತಾಳದೆ ರೈತ ಆತ್ಮಹತ್ಯೆ

Formar Suside
Published on

ಔರಾದ್: ಶೆಂಬೆಳ್ಳಿ ಗ್ರಾಮದಲ್ಲಿ ಭಾನುವಾರ ಸಾಲ ಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಕ್ಕುಗೊಂಡ ಹುಲಗೊಂಡ(65) ನೇಣಿಗೆ ಶರಣಾದವ. ಎರಡ್ಮೂರು ವರ್ಷಗಳಿಂದ ಮಳೆ ಕೊರತೆಯಿಂದ ವಿವಿಧ ಬೆಳೆಗಳು ಹಾನಿಯಾಗಿದ್ದವು. ಬ್ಯಾಂಕ್ ಮತ್ತು ಖಾಸಗಿ ಸಾಲ ತೀರಿಸಲಾಗದೆ ತನ್ನ ಗದ್ದೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತನ ಪುತ್ರ ರಾಜಕುಮಾರ ನೀಡಿದ ದೂರಿನ ಅನ್ವಯ ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಚಂದ್ರಶೇಖರರಾವ, ಪಿಎಸ್ಐ ಪ್ರಭಾಕರ ಪಾಟೀಲ್ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net