ಸಾಲಬಾಧೆಯಿಂದ ರೈತ ಆತ್ಮಹತ್ಯೆ

14 mlv 2 ಕೆ.ಎಲ್.ರವಿ(47)
Published on

ಮಳವಳ್ಳಿ: ತಾಲೂಕಿನ ಕಿರಗಸೂರು ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಸೋಮವಾರ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಕೆ.ಎಲ್.ರವಿ(47) ಮೃತರು. ಸಾಲಮಾಡಿ ತಮಗೆ ಸೇರಿದ ಕೃಷಿಭೂಮಿಯಲ್ಲಿ ವ್ಯವಸಾಯ ಮಾಡಿಸಿದ್ದ ಇವರು, ಬೆಳೆ ಹಾನಿಯಿಂದ ಸಾಲದ ಸುಳಿಯಲ್ಲಿ ಸಿಲುಕಿದ್ದರು. ಇದರಿಂದ ಮನನೊಂದು ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪಕ್ಕದ ಜಮೀನಿನಲ್ಲಿದ್ದ ರೈತನೊಬ್ಬ ಇದನ್ನು ಗಮನಿಸಿ ಕುಟುಂಬದವರಿಗೆ ಮಾಹಿತಿ ನೀಡಿದರು. ಕೂಡಲೇ ರವಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗಮದ್ಯೆ ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತ ರವಿ ಪತ್ನಿ ರತ್ನಮ್ಮ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net