More

    ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

    ಪಾಂಡವಪುರ: ತಾಲೂಕಿನ ಎಣ್ಣೆಹೊಳೆಕೊಪ್ಪಲಿನಲ್ಲಿ ಸಾಲಬಾಧೆ ತಾಳಲಾರದೆ ಯುವ ರೈತನೊಬ್ಬ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
    ಗ್ರಾಮದ ಲೇ.ನಾಗರಾಜು ಅವರ ಪುತ್ರ ಶಿವಕುಮಾರ್(35) ಆತ್ಮಹತ್ಯೆಗೆ ಶರಣಾದ ರೈತ. 1.5 ಎಕರೆ ಜಮೀನು ಹೊಂದಿದ್ದ ರೈತ ಶಿವಕುಮಾರ್, ವ್ಯವಸಾಯಕ್ಕಾಗಿ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳು ಸೇರಿದಂತೆ ವಿವಿಧ ಸ್ವಸಹಾಯ ಸಂಘಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದರು. ಜತೆಗೆ 3 ಲಕ್ಷ ರೂ. ಮೌಲ್ಯದ ಒಡವೆಗಳನ್ನು ಗಿರವಿ ಇಟ್ಟು ಹಣ ಪಡೆದುಕೊಂಡಿದ್ದರು ಎನ್ನಲಾಗಿದೆ. ಸಾಲ ನೀಡಿದ್ದ ಬ್ಯಾಂಕುಗಳಿಂದ ಸಾಲ ಮರುಪಾವತಿಗಾಗಿ ಒತ್ತಡ ಹೆಚ್ಚಿದ್ದ ಹಿನ್ನೆಲೆಯಲ್ಲಿ ಮನನೊಂದ ಗುರುವಾರ ಸಂಜೆ ಕೊಟ್ಟಿಗೆಯ ಸೂರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts