More

    ಸಾಲ ಮನ್ನಾದ ಹಣ ಬಿಡುಗಡೆಗೆ ಒತ್ತಾಯ

    ಹಳಿಯಾಳ: ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಅಲ್ಪಾವಧಿ ಬೆಳೆ ಸಾಲ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಸಾಲ ಮನ್ನಾದ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

    ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ನೇತೃತ್ವದಲ್ಲಿ ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕರು ಸೋಮವಾರ ಮಿನಿವಿಧಾನಸೌಧಕ್ಕೆ ತೆರಳಿ ತಹಸೀಲ್ದಾರ್ ವಿದ್ಯಾಧರ ಗುಳಗುಳೆ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕೃಷಿ ಸೇವಾ ಸಹಕಾರಿ ಸಂಘದಲ್ಲಿ ಅಲ್ಪಾವಧಿ ಸಾಲ ಪಡೆದ ರೈತರ 1ಲಕ್ಷ ರೂ.ವರೆಗಿನ ಸಾಲವನ್ನು 2018ರಲ್ಲಿ ರಾಜ್ಯ ಸರ್ಕಾರ ಮನ್ನಾ ಮಾಡಿತ್ತು. ಅರ್ಹ ಸಾಲಗಾರರ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. 359 ರೈತರ ಖಾತೆಗಳಿಗೆ 2.48 ಕೋ.ರೂ. ಸಾಲ ಮನ್ನಾದ ಹಣ ಜಮಾ ಆಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರೈತರೊಂದಿಗೆ ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

    ವಿ.ಪ. ಸದಸ್ಯ ಎಸ್.ಎಲ್. ಘೊಟ್ನೇಕರ, ಜಿಲ್ಲಾ ಸಹಕಾರಿ ಯೂನಿಯನ್ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಶಿವಪುತ್ರಪ್ಪ ನುಚ್ಛಂಬ್ಲಿ, ರೇಷ್ಮಾ ಪಾಟೀಲ, ತುಕಾರಾಮ ಗೌಡ, ವಾಮನ ಮಿರಾಶಿ, ಮಾರುತಿ ಕಾಂಬ್ರೆಕರ, ಸಂಜು ಪಾಟೀಲ, ನಾಗೇಂದ್ರ ಗೌಡ, ನಾಗರಾಜ ಮಾದಪೊ ಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts