More

    ಸಾಲ ಸದ್ವಿನಿಯೋಗದಿಂದ ಗ್ರಾಮೀಣ ಚಿತ್ರಣ ಬದಲು

    ಗೌರಿಬಿದನೂರು: ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಸಾಲ ನೀಡಲಾಗುತ್ತಿದೆ, ಸ್ವ-ಸಹಾಯ ಸಂಘಗಳ ಪದಾಧಿಕಾರಿಗಳು, ಸಾಲವನ್ನು ನಿಗದಿತ ಉದ್ದೇಶಗಳಿಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

    ಡಿಸಿಸಿ ಬ್ಯಾಂಕ್‌ನಿಂದ ಭಾನುವಾರ ತಾಲೂಕಿನ ಮೇಳ್ಯ ಗ್ರಾಮದ 28 ಸ್ತ್ರೀಶಕ್ತಿ, ಸ್ವ ಸಹಾಯ ಸಂಘಗಳಿಗೆ 1.40ಕೋಟಿ ರೂ. ಹಾಗೂ ನಗರಗೆರೆಯಲ್ಲಿ 38 ಸಂಘಗಳಿಗೆ 1.90 ಕೋಟಿ ರೂ. ಸಾಲದ ಚೆಕ್ ವಿತರಿಸಿ ಮಾತನಾಡಿದರು.

    ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಮಾತ್ರ ಕುಟುಂಬ ಸುಸ್ಥಿತಿಯಲ್ಲಿರುತ್ತದೆ. ಆ ಮೂಲಕ ಗ್ರಾಮೀಣ ಬದುಕನ್ನು ಹಸನಾಗಿಸುವುದು ಈ ಸೌಲಭ್ಯದ ಉದ್ದೇಶವಾಗಿದೆ. ಸರಿಯಾಗಿ ಲೆಕ್ಕ ಬರೆಯುತ್ತಾ, ಸಾಲದ ಹಣ ಸದ್ವಿನಿಯೋಗ ಮಾಡಿಕೊಂಡಲ್ಲಿ ಸ್ವ ಸಹಾಯ ಸಂಘಗಳು ಗ್ರಾಮೀಣ ಚಿತ್ರಣವನ್ನೇ ಬದಲಿಸುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಈಗಾಗಲೇ ತಾಲೂಕಿನ 35 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಸಾಲ ಒದಗಿಸಲಾಗಿದೆ, ಮುಂದಿನ ದಿನಗಳಲ್ಲಿ 1 ಲಕ್ಷ ಮಹಿಳೆಯರಿಗೆ ಶೂನ್ಯ ಬಡ್ಡಿದರದ ಸಾಲ ನೀಡುವ ಗುರಿ ಹೊಂದಿದ್ದು, ಡಿಸಿಸಿ ಬ್ಯಾಂಕ್‌ನಿಂದ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಪಕ್ಷಾತೀತವಾಗಿ ಮಾಡಲಾಗುತ್ತಿದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.

    ಸಣ್ಣ ಮತ್ತು ಮಧ್ಯಮ ರೈತ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡಲು ಖಾಸಗಿ ಬ್ಯಾಂಕ್ ಹಾಗೂ ವಾಣಿಜ್ಯ ಬ್ಯಾಂಕ್‌ಗಳು ಹಿಂದೆಮುಂದೆ ನೋಡುತ್ತವೆ, ಇದನ್ನು ಗಮನದಲ್ಲಿರಿಸಿಕೊಮಡು ಡಿಸಿಸಿ ಬ್ಯಾಂಕ್ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿದ್ದು, ಸದುಪಯೋಗ ಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿಸುವಂತೆ ನಿರ್ದೇಶಕ ಮರಳೂರು ಹನುಮಂತರೆಡ್ಡಿ ಮನವಿ ಮಾಡಿದರು.

    ವ್ಯವಸ್ಥಾಪಕ ಮಹಮ್ಮದ್ ಅಸ್ಲಾಂ, ಜಿಪಂ ಮಾಜಿ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮೇಳ್ಯ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಗೌರಮ್ಮ, ಕಾರ್ಯದರ್ಶಿ ರಾಮಲಿಂಗಪ್ಪ, ನಗರಗೆರೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ಲಕ್ಷ್ಮೀಪತಿರೆಡ್ಡಿ, ಕಾರ್ಯದರ್ಶಿ ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts