More

    ಸಾವಯವ ಕೃಷಿಯತ್ತ ಚಿತ್ತಹರಿಸಿ

    ಲಕ್ಷ್ಮೇಶ್ವರ: ರೈತರು ಆಧುನಿಕ ಕೃಷಿ ಪದ್ಧತಿ ಮತ್ತು ತಂತ್ರಜ್ಞಾನಗಳನ್ನು ಬಳಸಿಕೊಂಡು ತೋಟಗಾರಿಕೆ ಮತ್ತು ಖುಷ್ಕಿ ಕೃಷಿಯನ್ನು ಲಾಭದಾಯಕವಾಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಹೊಂದಬೇಕು ಎಂದು ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಹೇಳಿದರು.

    ಪಟ್ಟಣದ ಸೋಮನಗೌಡ ಪಾಟೀಲ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಆತ್ಮಾ ಯೋಜನೆಯಡಿ ಹಮ್ಮಿಕೊಳ್ಳಲಾಗಿದ್ದ ವೀಳ್ಯದೆಲೆ ಬೆಳೆಗಾರರ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಸಾಕಷ್ಟು ಅನುದಾನ ನೀಡಿ ಯೋಜನೆಗಳನ್ನು ರೂಪಿಸುತ್ತಿದೆ. ರೈತರು ಎರೆಹುಳು ಗೊಬ್ಬರ, ತಿಪ್ಪೆಗೊಬ್ಬರ ಬಳಸಿ ಭೂಮಿಯ ಫಲವತ್ತತೆ ಹೆಚ್ಚಿಸಬೇಕು. ರಾಸಾಯನಿಕಗಳ ಬಳಕೆಯಿಂದ ದೂರವಿದ್ದು, ಸಾವಯವ ಕೃಷಿಯತ್ತ ಚಿತ್ತ ಹರಿಸಬೇಕು ಎಂದು ಹೇಳಿದರು.

    ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕ ಸುರೇಶ ಕುಂಬಾರ ಮಾತನಾಡಿ, ವೀಳ್ಯದೆಲೆ ಅತ್ಯಂತ ಸೂಕ್ಷ್ಮ ಬೆಳೆಯಾಗಿದ್ದು, ಇದನ್ನು ಜಾಗರೂಕತೆಯಿಂದ ಪಾಲನೆ-ಪೋಷಣೆ ಮಾಡಬೇಕು. ಇದು ಎಲ್ಲ ಕಾಲದಲ್ಲಿ ಬೆಳೆಯುವ ಮತ್ತು ಬೇಡಿಕೆ ಇರುವ ಬೆಳೆಯಾಗಿದ್ದು ರೈತರು ಸಾವಯವ ಪದ್ಧತಿ ಅಳವಡಿಸಿಕೊಂಡು ಬೆಳೆದಾಗ ಹೆಚ್ಚು ಲಾಭದಾಯಕವಾಗುತ್ತದೆ ಎಂದರು. ಪ್ರಗತಿಪರ ರೈತ ಸೋಮನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದ ಡಾ. ಕೆ.ಎಸ್. ಮುದ್ಲಾಪೂರ ಉಪನ್ಯಾಸ ನೀಡಿದರು. ರೈತರಾದ ಚನ್ನಪ್ಪ ಜಗಲಿ, ಬಸಣ್ಣ ಬೆಂಡಿಗೇರಿ, ಪೂರ್ಣಾಜಿ ಕರಾಟೆ, ಯಲ್ಲಪ್ಪಗೌಡ ಉದ್ದನಗೌಡ್ರ, ಶಂಕರಗೌಡ ಪಾಟೀಲ, ನೀಲಪ್ಪ ಹತ್ತಿ, ಮಲ್ಲನಗೌಡ ಪಾಟೀಲ, ಈರಣ್ಣ ಅಂಕಲಕೋಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts