More

    ಸಾಹಿತ್ಯದ ಬಗ್ಗೆ ಯುವಕರ ನಿರಾಸಕ್ತಿ: ಎಂಎಲ್‌ಸಿ ಅರುಣ್ ಬೇಸರ

    ಶಿವಮೊಗ್ಗ: ಯುವ ಪೀಳಿಗೆಯಲ್ಲಿ ಸಾಹಿತ್ಯದ ಬಗೆಗಿನ ಆಸಕ್ತಿ ಕಡಿಮೆ ಆಗುತ್ತಿದ್ದು ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಕಳವಳ ವ್ಯಕ್ತಪಡಿಸಿದರು.
    ಚಾಲುಕ್ಯನಗರದ ಸಾಹಿತ್ಯ ಗ್ರಾಮದಲ್ಲಿ ಗುರುವಾರ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಾಹಿತ್ಯ ಸಾಂಸ್ಕೃತಿಕ ಬಿಕ್ಕಟ್ಟುಗಳು ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮೇಳನಗಳು, ಜಯಂತಿಗಳು ಕೇವಲ ಒಂದು ವರ್ಗಕ್ಕೆ ಸೀಮಿತಗೊಳ್ಳಬಾರದು. ಎಲ್ಲರೂ ಒಟ್ಟಾಗಿ ಸೇರಿ ಆಚರಣೆ ಮಾಡಿದಾಗ ಮಾತ್ರ ಯಶಸ್ಸು ಸಿಗಲಿದೆ ಎಂದರು.
    ನಾಟಕ, ರಂಗಭೂಮಿ ಬಗ್ಗೆ ಜನರಿಗೆ ಒಲವು ಕಡಿಮೆ ಆಗುತ್ತಿದೆ. ಹಿಂದೆಲ್ಲ ಎಷ್ಟೋ ನಾಟಕಗಳು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಸಮಸ್ಯೆಗಳ ಬಗ್ಗೆ ಸರ್ಕಾರಗಳ ಕಣ್ಣು ತೆರೆಯುತ್ತಿದ್ದವು. ಇಂದು ಕಾಲಘಟ್ಟ ಬದಲಾಗಿದ್ದು ಸಾಹಿತ್ಯ ಚಟುವಟಿಕೆಗಳಲ್ಲಿ ಜನರು ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು.
    ಶಿಕ್ಷಣದ ವ್ಯವಸ್ಥೆಯೂ ಬದಲಾವಣೆ ಆಗುತ್ತಿದ್ದು ಪಠ್ಯಪುಸ್ತಕಗಳಲ್ಲೂ ಕೆಲ ಬದಲಾವಣೆಗಳು ಆಗಬೇಕಿವೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎನ್‌ಇಪಿ(ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಗೆ ತಂದಿದೆ. ಹೊಸ ಶಿಕ್ಷಣದ ಜತೆಗೆ ಸಮಾಜವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಹೇಳಿದರು.
    ಸಾಂಸ್ಕೃತಿಕ ಬಿಕ್ಕಟ್ಟುಗಳು ಕುರಿತು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಟಿ.ಅವಿನಾಶ್ ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷ ಲಕ್ಷ್ಮಣ ಕೊಡಸೆ, ಚಿಂತಕ ಡಾ. ರಾಜೇಂದ್ರ ಚೆನ್ನಿ, ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts