More

    ಸಾಹುಕಾರ ದರ್ಶನಕ್ಕೆ ಹರಿದುಬಂದ ಜನಸಾಗರ

    ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಕತ್ತಿ ಅವರ ತೋಟದಲ್ಲಿ ತಂದೆ ವಿಶ್ವನಾಥ ಕತ್ತಿ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವದೊಂದಿಗೆ ವೀರಶೈವ ಲಿಂಗಾಯತ ಸಮುದಾಯದ ವಿಧಿ-ವಿಧಾನದಂತೆ ಸಚಿವ ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ಬುಧವಾರ ನೆರವೇರಿತು. ಬಾರದೂರಿಗೆ ಪಯಣ ಬೆಳೆಸಿದ ತಮ್ಮ ಮನೆಯ ಮಗನಂತಿದ್ದ ಜನಪ್ರತಿನಿಧಿಯ ಮುಖವನ್ನು ಕೊನೆಯದಾಗಿ ನೋಡಲು ಸಾವಿರಾರು ಜನರು ಆಗಮಿಸಿದ್ದರು. ನಿಂತಲ್ಲೇ ಕೆಲವರು ಗಳಗಳನೆ ಅಳುತ್ತಿದ್ದರೆ ಹಲವರು ಕಳೆಗುಂದಿದ ಮುಖ ಹೊತ್ತು ನಿಂತಿದ್ದರು.

    ವಿಶ್ವರಾಜ ಸಕ್ಕರೆ ಕಾರ್ಖಾನೆ ಅವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಹುಕ್ಕೇರಿ ಕ್ಷೇತ್ರ ಸೇರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಜನರು ಅಂತಿಮ ದರ್ಶನ ಪಡೆದರು. ಕುಟುಂಬದ ಸದಸ್ಯರು ಹಾಗೂ
    ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿತ್ತು. ಪಾರ್ಥಿವ ಶರೀರ ಹೊತ್ತ ವಾಹನ ಮುಂದೆ ಸಾಗಲೂ ಜಾಗ ಇಲ್ಲದಂತೆ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ರಸ್ತೆಯುದ್ದಕ್ಕೂ ಸಾವಿರಾರು ಜನ ಅಂತಿಮ ದರ್ಶನ ಪಡೆದರು.

    ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಶ್ರೀ, ಗದಗ-ಡಂಬಳ ತೋಂಟದ ಡಾ.ಸಿದ್ದರಾಮ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಗೃಹ ಸಚಿವ ಆರಗ ಜ್ಣಾನೇಂದ್ರ, ಸಚಿವರಾದ ಆರ್.ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ, ಶಾಸಕರಾದ ಎಚ್.ಡಿ.ರೇವಣ್ಣ, ಶ್ರೀಮಂತ ಪಾಟೀಲ, ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸಿ.ಸಿ.ಪಾಟೀಲ, ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ.ಪಾಟೀಲ, ಅಭಯ ಪಾಟೀಲ, ಅರವಿಂದ ಬೆಲ್ಲದ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ, ಅನಿಲ ಬೆನಕೆ, ಲಕ್ಷ್ಮೀ ಹೆಬ್ಬಾಳಕರ್, ಡಾ.ಅಂಜಲಿ ನಿಂಬಾಳ್ಕರ್, ಪಿ.ರಾಜೀವ, ದುರ್ಯೋಧನ ಐಹೊಳೆ, ಪ್ರಕಾಶ ಹುಕ್ಕೇರಿ, ಸಂಸದ ಈರಣ್ಣ ಕಡಾಡಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕರಾದ ರಾಜು ಕಾಗೆ, ಫಿರೋಜ್ ಸೇಠ್, ಶಶಿಕಾಂತ ನಾಯಿಕ, ಮಹಾಂತೇಶ ಕವಟಗಿಮಠ, ಅರವಿಂದ ಪಾಟೀಲ, ಅಭಯ ಪಾಟೀಲ, ಮಹೇಶ ಕುಮಠಳ್ಳಿ, ಮಹಾದೇವಪ್ಪ ಯಾದವಾಡ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 50 ಜನ ಮಠಾಧೀಶರು ಪಾಲ್ಗೊಂಡಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹಾಗೂ ಹೆಚ್ವುವರಿ ವರಿಷ್ಠಾಧಿಕಾರಿ ಮಾಹಾನಿಂಗ ನಂದಗಾವಿ ನೇತೃತ್ವದಲ್ಲಿ ಡಿಎಸ್‌ಪಿಗಳು, ಸಿಪಿಐಗಳು ಹಾಗೂ ಸಿಬ್ಬಂದಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts