More

    ಸಿಂಧುತ್ವ ಪ್ರಮಾಣಪತ್ರ ಸಿಗದಿದ್ದಕ್ಕೆ ಆತ್ಮಹತ್ಯೆ

    ಹುಮನಾಬಾದ್: ಎಸ್ಟಿ ಗೊಂಡ ಸಿಂಧುತ್ವ ಪ್ರಮಾಣಪತ್ರ ದೊರೆಯದ ಹಿನ್ನೆಲೆಯಲ್ಲಿ ಮನನೊಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ ನಿರ್ವಾಹಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಾರಚಿಂಚೋಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

    ಓಂಕಾರ ರೇವಣ್ಣಪ್ಪ ಶೇರಿಕಾರ (42) ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರ. ಬೆಳಗ್ಗೆ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ಭಾಲ್ಕಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದ ಓಂಕಾರಗೆ ಸಿಂಧುತ್ವ ಪ್ರಮಾಣಪತ್ರ ದೊರೆಯದ ಹಿನ್ನೆಲೆಯಲ್ಲಿ ಅನೇಕ ಸಮಸ್ಯೆ ಎದುರಿಸುತ್ತಿದ್ದರು. ಹಲವು ಬಾರಿ ಇಲಾಖೆಯವರು ನೋಟಿಸ್ ನೀಡಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದ್ದರು. ಸಿಂಧುತ್ವ ಪ್ರಮಾಣಪತ್ರದ ಕಡತ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದು, ಪ್ರಮಾಣಪತ್ರ ನೀಡುವ ಸಂಬಂಧ ಸಕರ್ಾರದ ಆದೇಶಗಳಲ್ಲಿ ಗೊಂದಲದ ಕುರಿತು ಅಧಿಕಾರಿಗಳ ಗಮನಕ್ಕೆ ತಂದ್ದರೂ ಪದೇಪದೆ ನೋಟಿಸ್ ಜಾರಿಮಾಡಿ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ.

    ಮಿಂಚಿನ ಪ್ರತಿಭಟನೆ: ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿಟ್ಟು ಮಿಂಚಿನ ಪ್ರತಿಭಟನೆ ನಡೆಸಿದರು. ಸಕಾಲಕ್ಕೆ ಸಿಂಧುತ್ವ ಪ್ರಮಾಣಪತ್ರ ಸಿಗದ ಕಾರಣ ಓಂಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಶಾಸಕರಾದ ರಾಜಶೇಖರ ಪಾಟೀಲ್, ಬಂಡೆಪ್ಪ ಖಾಶೆಂಪುರ ಸಮಸ್ಯೆ ಆಲಿಸಿದರು. ಎಸ್ಟಿ ಗೊಂಡ ಪ್ರಮಾಣಪತ್ರದ ಕುರಿತು ಸದನದಲ್ಲಿ ಧ್ವನಿ ಎತ್ತುವ ಮೂಲಕ ಸಕರ್ಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಓಂಕಾರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆದರು. ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ರಮೇಶ ಕೊಳಾರ್ ಇದ್ದರು. ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts