More

    ಸಿಎಂ ಕೋವಿಡ್ ಪರಿಹಾರ ನಿಧಿಗೆ 1.10ಕೋಟಿ ರೂ.

    ಹಳಿಯಾಳ: ಕರೊನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದ ನಿರ್ದೇಶನದಂತೆ ತಲಾ 3 ಸಾವಿರ ರೂ. ಪೋ›ತ್ಸಾಹಧನ ನೀಡಲಾಗುತ್ತಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಹೇಳಿದರು.

    ಮಂಗಳವಾರ ಇಲ್ಲಿಯ ಎಪಿಎಂಸಿ ಸಭಾಂಗಣದಲ್ಲಿ ಕೆಡಿಸಿಸಿ ಬ್ಯಾಂಕ್ ಶಿರಸಿ ಮತ್ತು ಅದರ ಸಿಬ್ಬಂದಿ ಹಾಗೂ ಹಳಿಯಾಳ ದಾಂಡೇಲಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಜಂಟಿಯಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸನ್ಮಾನ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಕೆಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 1.10ಕೋಟಿ ರೂ. ನೀಡಲಾಗಿದೆ. ಹಳಿಯಾಳ, ದಾಂಡೇಲಿ, ಜೋಯಿಡಾ, ಮುಂಡಗೋಡ, ಯಲ್ಲಾಪುರ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಪೋ›ತ್ಸಾಹಧನ ವಿತರಿಸಲು 11ಲಕ್ಷ ರೂ ಮೀಸಲಾಗಿಟ್ಟಿದ್ದು, ಹಳಿಯಾಳ ಮತ್ತು ದಾಂಡೇಲಿ ತಾಲೂಕಿನ 122 ಹಾಗೂ ಜೊಯಿಡಾದ 60 ಆಶಾ ಕಾರ್ಯಕರ್ತೆಯರಿಗೆ ತಲಾ 3ಸಾವಿರ ರೂಗಳ ಚೆಕ್​ನ್ನು ನೀಡಲಾಗುತ್ತಿದೆ ಎಂದರು.

    ಸೇನಾನಿಗಳಿಗೆ ಸನ್ಮಾನ: ಲಾಕ್ ಡೌನ್ ಸಮಯದಲ್ಲಿ ಶ್ರಮಿಸಿದ ಹಳಿಯಾಳ ದಾಂಡೇಲಿ ತಾಲೂಕಿನ ತಹಸೀಲ್ದಾರ, ಪೌರ ಸಂಸ್ಥೆ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಹೆಸ್ಕಾಂ, ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಭೂಸೇನೆಯಲ್ಲಿ ಲೆಪ್ಟಿನೆಂಟ್​ರಾಗಿ ಹುದ್ದೆಗೆರಿರುವ ತಾಲೂಕಿನ ಲೆಫ್ಟಿನೆಂಟ್ ಪ್ರಕಾಶ ಶಿಡ್ಲಾಣಿ ಅವರನ್ನು ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ತಹಸೀಲ್ದಾರ ವಿದ್ಯಾಧರ ಗುಳಗುಳೆ, ಜಿ.ಪಂ ಉಪಾಧ್ಯಕ್ಷ ಸಂತೋಷ ರೇಣಕೆ, ತಹಸೀಲ್ದಾರ್ ವಿದ್ಯಾಧರ ಗುಳಗುಳೆ, ತಾ.ಪಂ ಇಒ ಪ್ರವೀಣಕುಮಾರ ಸಾಲಿ, ದಾಂಡೇಲಿ ಇಒ ಪರಶುರಾಮ ಗಸ್ತಿ, ಹೆಸ್ಕಾಂ ಎಇಇ ರವೀಂದ್ರ ಮೆಟಗುಡ್ಡ, ಪುರಸಭಾ ಮುಖ್ಯಾಧಿಕಾರಿ ಕೇಶವ ಚೌಗಲೆ, ದಾಂಡೇಲಿ ನಗರಸಭಾ ಆಯುಕ್ತ ಡಾ.ಸೈಯದ್ ಜಾಹೇದಲಿ, ವಲಯ ಅರಣ್ಯಾಧಿಕಾರಿ ಮಹೇಶ ಹಿರೇಮಠ, ತಾಲೂಕ ಆರೋಗ್ಯಾಧಿಕಾರಿ ಡಾ.ರಮೇಶ ಕದಂ, ಡಾ.ಗುರುಪ್ರಸಾದ ಆಚಾರಿ, ಇತರರು ಇದ್ದರು. ಕೃಷ್ಣ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts